ಬೆಂಗಳೂರು: ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿರುವ ನಗರದ ಸಂಚಾರ ಪೊಲೀಸರು ಕಳೆದ ಒಂದು ವಾರದಲ್ಲಿ 1187 ಪ್ರಕರಣಗಳನ್ನು ದಾಖಲಿಸಿದ್ದಾರೆ.ನಗರ ಸಂಚಾರ ಪೊಲೀಸರು 50 ಸಂಚಾರ ಠಾಣೆಗಳ ವ್ಯಾಪ್ತಿಯಲ್ಲಿ ಕಳೆದ ಡಿ.23 ರಿಂದ ಡಿ. 29 ರವರೆಗೆ ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿದ್ದ ವಾಹನ ಚಾಲಕರು, ಸವಾರರುಗಳ ವಿರುದ್ಧ ಹಾಗೂ ಅತಿವೇಗ ವಾಹನ ಚಲಾಯಿಸುವವರ ವಿರುದ್ಧ ವಿಶೇಷ ಕಾರ್ಯಾಚರಣೆಯನ್ನು ಕೈಗೊಳ್ಳಲಾಗಿತ್ತು.
ಮದ್ಯಪಾನ ಮಾಡಿ ವಾಹನ ಚಾಲನೆ ವಿಶೇಷ ಕಾರ್ಯಾಚರಣೆಯಲ್ಲಿ ವಿವಿಧ ಮಾದರಿಯ 95179 ವಾಹನಗಳ ತಪಾಸಣೆ ನಡೆಸಿ…1187 ಪ್ರಕರಣಗಳನ್ನು ದಾಖಲಿಸಿದ್ದರೆ, ಅತಿವೇಗದಿಂದ ವಾಹನ ಚಲಾಯಿಸುವವರ ಕಾರ್ಯಚರಣೆಯಲ್ಲಿ 165 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ ಎಂ.ಎನ್.ಅನುಚೇತ್ ತಿಳಿಸಿದ್ದಾರೆ.ದಾಖಲಿಸಿದ ಪ್ರಕರಣಗಳಿಂದ 1,65 ಲಕ್ಷ ರೂಪಾಯಿ ದಂಡವನ್ನು ಸಂಗ್ರಹಿಸಲಾಗಿದೆ. ನಗರದಲ್ಲಿ ಮದ್ಯಪಾನ ಮಾಡಿ ವಾಹನ ಚಲಾಯಿಸುವ ಮತ್ತು ಅತಿವೇಗ ವಾಹನ ಚಲಾಯಿಸುವವರಹಾವಳಿಯನ್ನು ತಡೆಗಟ್ಟಲು ಮತ್ತು ರಸ್ತೆ ಸುರಕ್ಷತೆಗಾಗಿ ವಿಶೇಷ ಕಾರ್ಯಾಚರಣೆ ಮುಂದುವರೆಸಲಾಗುವುದು ಎಂದು ತಿಳಿಸಿದರು.