ಹಾವೇರಿ: ಮಾಜಿ ಸಚಿವ ಮನೋಹರ್ ತಹಶೀಲ್ದಾರ್ (80) ನಿಧನರಾಗಿದ್ದಾರೆ. ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಮನೋಹರ್ ತಹಶಿಲ್ದಾರ ಅವರು ಬೆಂಗಳೂರಿನ ಚಾಮರಾಜ ಪೇಟೆಯಲ್ಲಿರುವ ಶಂಕರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ನಿನ್ನೆ ಮಧ್ಯರಾತ್ರಿ ಚಿಕಿತ್ಸೆ ಫಲಕಾರಿ ಯಾಗದೆ ಕೊನೆಯುಸಿರು ಎಳೆದಿದ್ದಾರೆ.
ಮನೋಹರ್ ತಹಶಿಲ್ದಾರ ನಾಲ್ಕು ಜನಪುತ್ರರು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಸಂಸದ ಬಸವರಾಜ ಬೊಮ್ಮಾಯಿ ಅವರು ಇತ್ತೀಚಿಗೆ ಚಾಮರಾಜ ಪೇಟೆಯಲ್ಲಿರುವ ಶಂಕರ್ ಆಸ್ಪತ್ರೆಗೆ ಭೇಟಿ ನೀಡಿ ಮನೋಹರ್ ತಹಶೀಲ್ದಾರ್ ಅವರ ಆರೋಗ್ಯ ವಿಚಾರಿಸಿದ್ದರು.ಹಾವೇರಿ ಜಿಲ್ಲೆಯ ಹಾನಗಲ್ ಕ್ಷೇತ್ರದ ಮಾಜಿ ಶಾಸಕ ಮನೋಹರ್ ತಹಶಿಲ್ದಾರ ಅವರು 2015ರಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಬಕಾರಿ ಸಚಿವರಾಗಿದ್ದರು.
ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ್ದರು. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಜೆಡಿಎಸ್ ತೊರೆದು ಬಿಜೆಪಿ ಪಕ್ಷ ಸೇರಿದ್ದರು. ವಿಧಾನಸಭಾ ಉಪಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು. ಮನೋಹರ್ ತಹಶೀಲ್ದಾರ್ ಅವರ ನಿಧನಕ್ಕೆ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆಶಿವಕುಮಾರ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ, ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಮತ್ತಿತರ ಗಣ್ಯರು ಸಂತಾಪ ಸೂಚಿಸಿದ್ದಾರೆ.