ಬಳ್ಳಾರಿ: ಆಂಧ್ರಪ್ರದೇಶದ ಗಡಿಗೆ ಹೊಂದಿಕೊಂಡಿರುವ ಜಿಲ್ಲೆಯಲ್ಲಿ ಭಾನುವಾರ ಬೆಳಗ್ಗೆ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿದ್ದಾರೆ. ಮೂವರು ಸ್ಥಳದಲ್ಲೇ ಮೃತಪಟ್ಟರೆ, ಕಾರಿನಲ್ಲಿದ್ದ ಮತ್ತೋರ್ವ ಗಾಯಗೊಂಡಿದ್ದಾರೆ.
ಆಂಧ್ರ ಪ್ರದೇಶದ ಗಡಿಭಾಗ ವಿಡಪನಕಲ್ ಬಳಿ ಈ ಅಪಘಾತ ಸಂಭವಿಸಿದ್ದು, ಮೃತರನ್ನು ಡಾ. ಗೋವಿಂದರಾಜುಲು, ಡಾ.ಯೋಗೇಶ್ ಮತ್ತು ವಕೀಲ ವೆಂಕಟನಾಯ್ಡು ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮತ್ತೋರ್ವ ಖಾಸಗಿ ಆಸ್ಪತ್ರೆ ವೈದ್ಯ ಅಮರೇಗೌಡ ಪಾಟೀಲ್ ಸ್ಥಿತಿ ಗಂಭೀರವಾಗಿದೆ.
ವಿದೇಶ ಪ್ರವಾಸಕ್ಕೆ ತೆರಳಿದ್ದ ಸ್ನೇಹಿತರು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನೆರೆಯ ಆಂಧ್ರಪ್ರದೇಶದ ಅನಂತಪುರ ಮೂಲಕ ಬಳ್ಳಾರಿಗೆ ಹಿಂತಿರುಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಬೆಳಗಿನ ಜಾವ 4 ಗಂಟೆಗೆ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ.