ಇಂದಿನಿಂದ ಯುಎಇನಲ್ಲಿ ಮಹಿಳಾ ಟಿ20 ವಿಶ್ವಕಪ್ ಆರಂಭವಾಗಲಿದೆ. ಈ ಟೂರ್ನಿಯಲ್ಲಿ ಭಾರತ ಸಹ ಭಾಗವಹಿಸುತ್ತಿದ್ದು, ಕಪ್ ಗೆಲ್ಲುವ ಫೆವರೀಟ್ ತಂಡಗಳಲ್ಲಿ ಒಂದಾಗಿದೆ. ಈ ಮೆಗಾ ಟೂರ್ನಿಯನ್ನು ಕಣ್ಣು ತುಂಬಿಕೊಳ್ಳಲು ಅಭಿಮಾನಿಗಳು ಕಾತುರರಾಗಿದ್ದಾರೆ. ಇವರೆಗೆ ಇಂಗ್ಲೆಂಡ್, ಆಸ್ಟ್ರೇಲಿಯಾ ಮತ್ತು ವೆಸ್ಟ್ ಇಂಡೀಸ್ ತಂಡಗಳು ಮಾತ್ರ ಮಹಿಳಾ ಟಿ20 ವಿಶ್ವಕಪ್ ಪ್ರಶಸ್ತಿಯನ್ನು ಗೆದ್ದುಕೊಂಡಿವೆ.
ಈ ಬಾರಿಯ ಚಾಂಪಿಯನ್ರಿಗೆ ಹುಡುಕಾಟ ನಡೆದಿದೆ.ಬಾಂಗ್ಲಾದೇಶದಲ್ಲಿ ನಡೆಯಬೇಕಿದ್ದ ಮಹಿಳೆಯ ಟಿ20 ವಿಶ್ವಕಪ್ ಯುಎಇಗೆ ಶಿಫ್ಟ್ ಆಗಿದೆ. ಬಾಂಗ್ಲಾದಲ್ಲಿ ನಡೆಯುತ್ತಿರುವ ಹಿಂಸಾಚಾರಗಳನ್ನು ಗಮನದಲ್ಲಿಟ್ಟುಕೊಂಡು, ಐಸಿಸಿ ಈ ಟೂರ್ನಿಯನ್ನು ಶಿಫ್ಟ್ ಮಾಡಿದೆ. ಈಗ ಮರಳು ನಾಡಿನಲ್ಲಿ ಕ್ರಿಕೆಟ್ ಕ್ರೇಜ್ ಹೆಚ್ಚಾಗಿದೆ. ಅಕ್ಟೋಬರ್ 3 ರಿಂದ 20ರವರೆಗೆ ಮಹಿಳಾ ವಿಶ್ವಕಪ್ ನಡೆಯಲಿದ್ದು, ಒಟ್ಟು 10 ತಂಡಗಳು ಭಾಗವಹಿಸುತ್ತಿವೆ.
10 ತಂಡಗಳು 2 ಗುಂಪು: ಭಾರತ ತಂಡ ಎ ಗುಂಪಿನಲ್ಲಿ ಸ್ಥಾನ ಪಡೆದಿದೆ. ಈ ಗುಂಪಿನಲ್ಲಿ ಬಲಿಷ್ಠ ತಂಡಗಳು ಇವೆ. ಒಟ್ಟು 10 ತಂಡಗಳನ್ನು ಎರಡು ಗುಂಪಿನಲ್ಲಿ ವಿಂಗಡಿಸಲಾಗಿದೆ. ಭಾರತವು ಪಾಕಿಸ್ತಾನ, ಆಸ್ಟ್ರೇಲಿಯಾ, ನ್ಯೂಜಿಲೆಂಡ್ ಮತ್ತು ಶ್ರೀಲಂಕಾ ಎ ಗುಂಪಿನಲ್ಲಿ ಕಾಣಿಸಿಕೊಂಡೆ, ಬಾಂಗ್ಲಾದೇಶ, ಸ್ಕಾಟ್ಲೆಂಡ್, ಇಂಗ್ಲೆಂಡ್, ದಕ್ಷಿಣ ಆಫ್ರಿಕಾ ಮತ್ತು ವೆಸ್ಟ್ ಇಂಡೀಸ್ ಬಿ ಗುಂಪಿನಲ್ಲಿ ಸ್ಥಾನ ಪಡೆದಿವೆ.
ಅ.4 ರಿಂದ ಭಾರತದ ಅಭಿಯಾನ ಶುರುಭಾರತ ತನ್ನ ಅಭಿಯಾನವನ್ನು ಅಕ್ಟೋಬರ್ 4ರಿಂದ ಆರಂಭಿಸಲಿದೆ. ಹರ್ಮನ್ ಪ್ರೀತ್ ಪಡೆ ತನ್ನ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಕಾದಾಟ ನಡೆಸಲಿದೆ. ಅಕ್ಟೋಬರ್ 6 ರಂದು ಭಾರತದ ಎರಡನೇ ಪಂದ್ಯ ನಡೆಯಲಿದ್ದು, ಪಾಕಿಸ್ತಾನ ವಿರುದ್ಧ ಸೆಣಸಾಡಲಿದೆ. ಅಕ್ಟೋಬರ್ 9 ರಂದು ಶ್ರೀಲಂಕಾ ವಿರುದ್ಧ, ಅಕ್ಟೋಬರ್ 13 ರಂದು ಆಸ್ಟ್ರೇಲಿಯಾ ವಿರುದ್ಧ ಪಂದ್ಯವನ್ನು ಆಡಲಿದೆ.