ಬೆಂಗಳೂರು: ಬನ್ನೇರುಘಟ್ಟ ರಸ್ತೆಯಲ್ಲಿರುವ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ವಸತಿ ಗೃಹದಲ್ಲಿ ವಾಸವಾಗಿದ್ದ ನಿಲೈ 28 ವರ್ಷದ ಯುವಕ, ಎರಡನೇ ಮಹಡಿಯಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ವರದಿಯಾಗಿದೆ.
ಗುಜರಾತ್ ಮೂಲದವನಾದ ನಿಲಯ್ ಇಂಡಿಯನ್ ಇನ್ಸ್ಟಿಟ್ಯೂಟ್ಆಫ್ ಮ್ಯಾನೇಜ್ಮೆಂಟ್ ನಲ್ಲಿ ಪಿಜಿ ಡಿಪ್ಲೋಮೋ ಕೋರ್ಸ್ ಮಾಡುತ್ತಿದ್ದ.ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುತ್ತಾನೆ ಎಂದು ಇನ್ನು ತಿಳಿದು ಬಂದಿಲ್ಲ ಎಂದು ಅಗ್ನಿಯ ವಿಭಾಗದ ಡಿಸಿಪಿ ಸಾರಾ ಫಾತಿಮಾ ತಿಳಿಸುತ್ತಾರೆ.
ಪೋಷಕರು ಗುಜರಾತ್ನಿಂದ ಬಂದಿದ್ದು ಶವವನ್ನು ಮರಣೋತ್ತರದ ಪರೀಕ್ಷೆಯ ನಂತರ ಪೋಷಕರಿಗೆ ನೀಡಲಾಗುವುದು ಎಂದು ತಿಳಿಸಿದರು.ಮೈಕೋಲೇಟ್ ಪೊಲೀಸರು ಆತ್ಮಹತ್ಯೆ ಪ್ರಕರಣ ದಾಖಲು ಮಾಡಿಕೊಂಡು ಮೃತನುವಾಸಿಸುತ್ತಿದ್ದ ರೂ ಮತ್ತು ಮೊಬೈಲ್ ಹಾಗೂ ಇತರೆ ವಿಷಯಗಳ ಬಗ್ಗೆ ಪರಿಶೀಲನೆ ನಡೆಸಿರುತ್ತಾರೆ.