ಮುಂಬೈ: ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟವನ್ನು ಇಂದು ತರಾಟೆಗೆ ತೆಗೆದುಕೊಂಡ ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ ಬಣ) ನಾಯಕ ಸಂಜಯ್ ರಾವತ್ ಅವರು ಎಲೆಕ್ಟ್ರಾನಿಕ್ ಮತಯಂತ್ರಗಳ (ಇವಿಎಂ) ಮೆರವಣಿಗೆ ನಡೆಸಿ, ಇವಿಎಂ ಮಂದಿರ ನಿರ್ಮಿಸುವ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ.
ನಾಗ್ಪುರದಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಕೇಂದ್ರ ಕಚೇರಿಯ ಮುಂಭಾಗದಲ್ಲಿ ಇವಿಎಂ ಮಂದಿರ ನಿರ್ಮಾಣದ ಕುರಿತು ಮೊದಲ ಕ್ಯಾಬಿನೆಟ್ ಸಭೆಯಲ್ಲಿ ಈ ಬಗ್ಗೆ ಘೋಷಿಸಬೇಕು ಎಂದು ಸಂಜಯ್ ರಾವತ್ ಹೇಳಿದ್ದಾರೆ. ಮಹಾರಾಷ್ಟ್ರದ ಮುಖ್ಯಮಂತ್ರಿಯ ಮೆರವಣಿಗೆಯನ್ನು ಅಲ್ಲಿಗೆ (ನಾಗ್ಪುರದಲ್ಲಿ) ನಡೆಸಲಾಗುತ್ತದೆ. ಸಿಎಂ ಮೆರವಣಿಗೆ ಹೊರಡುವ ಮುನ್ನ ಇವಿಎಂಗಳ ಮೆರವಣಿಗೆ ನಡೆಸಬೇಕು ಮತ್ತು ಮೊದಲ ಸಂಪುಟದಲ್ಲಿ ಆರ್ಎಸ್ಎಸ್ ಕೇಂದ್ರ ಕಚೇರಿ ಎದುರು ಇವಿಎಂ ಮಂದಿರ ನಿರ್ಮಿಸುವ ನಿರ್ಧಾರ ಕೈಗೊಳ್ಳಬೇಕು ಎಂದು ರಾವತ್ ಇಂದು ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.