ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರ ಜನ್ಮ ದಿನದ ಅಂಗವಾಗಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನೆಹರು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಉಪ ಮುಖ್ಯಮಂತ್ರಿಯವರ ಕಾರ್ಯದರ್ಶಿ ರಾಜೇಂದ್ರ ಚೋಳನ್ ಸೇರಿದಂತೆ ಇತರರು ಭಾಗವಹಿಸಿದ್ದರು.
