ಬೆಂಗಳೂರು: ಬ್ಯಾಂಕ್ಗೆ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ದೋಷಿ ಎಂದು ತೀರ್ಪು ನೀಡಲಾಗಿದೆ.ಬೆಂಗಳೂರಿನ ವಿಶೇಷಜನಪ್ರತಿನಿಧಿಗಳ ನ್ಯಾಯಾಲಯ ತೀರ್ಪು ನೀಡಿ ಆದೇಶ ಹೊರಡಿಸಿದ್ದಾರೆ.ಸಿಬಿಐ ಪ್ರಕರಣದಲ್ಲಿ ಈ ತೀರ್ಪು ನೀಡಲಾಗಿದೆ. 2008ರಲ್ಲಿ ಎಸ್ಬಿಎಂ ಬ್ಯಾಂಕ್ ಕೃಷ್ಣಯ್ಯ ಶೆಟ್ಟಿ ಅವರು 7.17 ಕೋಟಿ ರೂಪಾಯಿ ಸಾಲ ಪಡೆಯಲು ನಕಲಿ ಸಾಲಗಾರರ ದಾಖಲೆ ಸೃಷ್ಟಿಸಿ ಸಾಲ ಪಡೆದಿದ್ದರು ಎಂದು ದೂರು ನೀಡಿತ್ತು.
ಈ ಸಂಬಂಧ ದಾಖಲಾಗಿದ್ದ ದೂರಿನ ಹಿನ್ನೆಲೆ ವಿಚಾರಣೆ ನಡೆಸಿದ ವಿಶೇಷ ಪ್ರತಿನಿಧಿಗಳ ನ್ಯಾಯಾಲಯ ಕೃಷ್ಣಯ್ಯ ಶೆಟ್ಟಿ ದೋಷಿ ಎಂದು ತೀರ್ಪು ನೀಡಿ ಆದೇಶ ಹೊರಡಿಸಿದೆ.
ಕೃಷ್ಣಯ್ಯ ಶೆಟ್ಟಿ ಸೇರಿದಂತೆ ನಾಲ್ವರನ್ನು ದೋಷಿ ಎಂದು ಪರಿಗಣಿಸಲಾಗಿದ್ದು, ಎಂ.ಟಿ.ವಿ. ರೆಡ್ಡಿ, ಮುನಿರಾಜು, ಕೆ.ಶ್ರೀನಿವಾಸ್, ಎಂಬುವರು ದೋಷಿಗಳಾಗಿದ್ದಾರೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಧೀಶ ಸಂತೋಷ್ ಗಜಾನನ ಭಟ್ ಅಪರಾಧಿಗಳನ್ನು ವಶಕ್ಕೆ ಪಡೆಯುವಂತೆ ಸೂಚನೆ ನೀಡಿದ್ದಾರೆ.