ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಕೊಪ್ಪಳ ಜಿಲ್ಲೆಯ ಗಂಗಾವತಿ ಶಾಸಕ ಜನಾರ್ದನ ರೆಡ್ಡಿಗೆ ಸುಪ್ರೀಂ ಕೋರ್ಟ್ನಲ್ಲಿ ಕೊನೆಗೂ ರಿಲೀಫ್ ದೊರೆತಿದೆ.
ಬಳ್ಳಾರಿಗೆ ತೆರಳಲು ಅವರಿಗೆ ಸುಪ್ರೀಂಕೋರ್ಟ್ ಅನುಮತಿ ನೀಡಿ ಸೋಮವಾರ ಆದೇಶಿಸಿದೆ. ಇದರೊಂದಿಗೆ, ಯಾವುದೇ ಪೂರ್ವಾನುಮತಿ ಇಲ್ಲದೆ ಬಳ್ಳಾರಿಗೆ ತೆರಳಲು ಜನಾರ್ದನ ರೆಡ್ಡಗೆ ಅವಕಾಶ ದೊರೆತಂತಾಗಿದೆ..ಬಳ್ಳಾರಿ ಪ್ರವೇಶಕ್ಕೆ ಅವರಿಗಿದ್ದ ನಿರ್ಬಂಧವನ್ನು ಸರ್ವೋಚ್ಚ ನ್ಯಾಯಾಲಯ ತೆರವುಗೊಳಿಸಿದೆ. ಇದರೊಂದಿಗೆ ರೆಡ್ಡಿ ಬಳ್ಳಾರಿ ಪ್ರವೇಶ ನಿರಾಳವಾಗಿದೆ.
ರೆಡ್ಡಿ ಕುರಿತು ಸುಪ್ರೀಂ ಕೋರ್ಟ್ ನೀಡಿರುವ ಆದೇಶದಲ್ಲಿ ತಿಳಿಸಲಾಗಿದೆ.ಈ ಹಿಂದೆ ಬಳ್ಳಾರಿ, ಕಡಪ, ಅನಂತಪುರಕ್ಕೆ ತೆರಳಲು ಅವರು ಪೂರ್ವಾನುವತಿ ಪಡೆಯುವುದು ಕಡ್ಡಾಯವಾಗಿತ್ತು. ಅವರಿಗೆ ಜಾಮೀನು ನೀಡುವ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಈ ಷರತ್ತು ವಿಧಿಸಿತ್ತು. ಇದೀಗ ನ್ಯಾ. ಎಂಎಂ ಸುಂದರೇಶ್ ನೇತೃತ್ವದ ದ್ವಿ ಸದಸ್ಯ ಪೀಠದಿಂದ ಹೊಸ ಆದೇಶ ಹೊರಬಿದ್ದಿದೆ.