ಬೆಂಗಳೂರು: ಇತ್ತೀಚೆಗೆ ಬೆಂಗಳೂರು ಮಹಾನಗರದಲ್ಲಿ ಮಾದಕವಸ್ತು ಜಾಲ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಲು ಮುಂದಾಗಿದ್ದಾರೆ.
ಕೊರಿಯರ್ ಸಂಸ್ಥೆಗಳ ಪಾರ್ಸಲ್ನಲ್ಲಿ ಹೆಚ್ಚಾಗಿ ಮಾದಕ ವಸ್ತು ರವಾನೆಯಾಗುತ್ತಿತ್ತು ಎಂಬ ಹಿನ್ನೆಲೆಯಲ್ಲಿ ಕೊರಿಯರ್ ಸಂಸ್ಥೆಗಳಿಗೆ ಬಂದಿರುವ ಪಾರ್ಸಲ್ಗಳ ಪರಿಶೀಲನೆ ನಡೆಸಲು ಸಿಸಿಬಿ ಪೊಲೀಸರು ಮುಂದಾಗಿದ್ದಾರೆ.
ಇಂದು ಸಂಪಂಗಿರಾಮನಗರದ ಕೊರಿಯರ್ ಸಂಸ್ಥೆಯೊಂದಕ್ಕೆ ಭೇಟಿ ನೀಡಿದ್ದ ಸಿಸಿಬಿ ಅಧಿಕಾರಿಗಳು ಮತ್ತು ಸಿಬ್ಬಂದಿ ಶ್ವಾನದಳದೊಂದಿಗೆ ಕೊರಿಯರ್ ಸಂಸ್ಥೆಗಳ ಪಾರ್ಸಲ್ಗಳ ಪರಿಶೀಲನೆ ನಡೆಸಿದ್ದಾರೆ.