ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ನಾಳೆ ರಾಷ್ಟಿಯ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ನಾಳೆ ಬೆಳಿಗ್ಗೆ ೧೧ಗಂಟೆಗೆ ವಾರ್ತಾಸೌಧದ ಮಹಾತ್ಮಗಾಂಧಿ ಸಭಾಂಗಣದಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಬದಲಾಗುತ್ತಿರುವ ಪತ್ರಿಕಾಮಾಧ್ಯಮದ ಸ್ವರೂಪ ಕುರಿತು ವಿಚಾರ ಸಂಕಿರಣ ಏರ್ಪಡಿಸಲಾಗಿದೆ.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಿದ್ದು, ಮಾಧ್ಯಮ ಅಕಾಡೆಮಿ ಅಧ್ಯಕ್ಷ ಆಯೆಷಾಖಾನಂ ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ.
ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪಮೋಯ್ಲಿ ಆಶಯ ನುಡಿಗಳನ್ನಾಡಲಿದ್ದು, ಬೆಂಗಳೂರಿನ ಅಜೀಂ ಪ್ರೇಮ್ಜೀ ವಿಶ್ವವಿದ್ಯಾಲಯದ ಪ್ರಾದ್ಯಪಕ ಡಾ. ಎ. ನಾರಾಯಣ ಪ್ರಧಾನಭಾಷಣ ಮಾಡುವರು. ಶಾಸಕ ರಿಜ್ವಾನ್ ಅರ್ಷದ್ ಅಧ್ಯಕ್ಷತೆ ವಹಿಸಲಿದ್ದು, ಸಂಸದ ಪಿ.ಸಿ.ಮೋಹನ್ ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಮುಖ್ಯಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಮುಖ್ಯಮಂತ್ರಿಯವರು ಕಾರ್ಯದರ್ಶಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸರ್ಕಾರ ಕಾರ್ಯದರ್ಶಿ ಬಿಬಿ ಕಾವೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕಇಲಾಖೆ, ಆಯುಕ್ತ ಹೇಮಂತ್ ಎಂ. ನಿಂಬಾಳ್ಕರ್ ಗೌರವ ಉಪಸ್ಥಿತಿ ಇರುವರು.