ಮೆಲ್ಬೋರ್ನ್ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ-ಭಾರತ ನಡುವಣ 4ನೇ ಟೆಸ್ಟ್ ಪಂದ್ಯದಲ್ಲೂ ಬೇಲ್ಸ್ ಬದಲಾಟ ಮುಂದುವರೆದಿದೆ. ಈ ಪಂದ್ಯದ ದ್ವಿತೀಯ ಇನಿಂಗ್ಸ್ನಲ್ಲಿ 340 ರನ್ಗಳ ಗುರಿ ಪಡೆದ ಟೀಮ್ ಇಂಡಿಯಾ 33 ರನ್ಗಳಿಗೆ 3 ವಿಕೆಟ್ ಕಳೆದುಕೊಂಡಿತು.
ಈ ಹಂತದಲ್ಲಿ ಜೊತೆಯಾದ ಯಶಸ್ವಿ ಜೈಸ್ವಾಲ್ ಹಾಗೂ ರಿಷಭ್ ಪಂತ್ ಅರ್ಧಶತಕದ ಜೊತೆಯಾಟವಾಡಿದರು. ಇತ್ತ ಟೀಮ್ ಇಂಡಿಯಾ ಬ್ಯಾಟರ್ಗಳು ಉತ್ತಮ ಜೊತೆಯಾಟ ಮುಂದುವರೆಸುತ್ತಿದ್ದಂತೆ ಆಸ್ಟ್ರೇಲಿಯಾ ವೇಗಿ ಮಿಚೆಲ್ ಸ್ಟಾರ್ಕ್ ಬೇಲ್ಸ್ ಟ್ರಿಕ್ ಮೊರೆ ಹೋದರು.
ಬೇಲ್ಸ್ ಬದಲಿಸುವುದು ಏಕೆ?: ಟೆಸ್ಟ್ ಕ್ರಿಕೆಟ್ನಲ್ಲಿ ಬೇಲ್ಸ್ ಟ್ರಿಕ್ ಪರಿಚಯಿಸಿದ್ದು ಇಂಗ್ಲೆಂಡ್ ತಂಡದ ಮಾಜಿ ವೇಗಿ ಸ್ಟುವರ್ಟ್ ಬ್ರಾಡ್. ಎದುರಾಳಿ ತಂಡದ ವಿಕೆಟ್ ಬೀಳದಿದ್ದಾಗ ಬ್ರಾಡ್ ಬೇಲ್ಸ್ ಅನ್ನು ಅದಲು ಬದಲು ಮಾಡಿ ಬೌಲಿಂಗ್ ಮಾಡುತ್ತಿದ್ದರು.