ದೊಡ್ಡಬಳ್ಳಾಪುರ : ಮಿಶ್ರ ಬೆಳೆಗಳ ಮಧ್ಯೆ ಗಾಂಜಾ ಬೆಳೆದಿದ್ದ ದುಷ್ಕರ್ಮಿಗಳನ್ನು ಎಡೆಮುರಿ ಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.ರಾಗಿ ಹೊಲದಲ್ಲಿ ತೊಗರಿ, ಅವರೆ, ಹಲಸಂದೆ ಸಾಲುಗಳ ಮಧ್ಯೆ ಗಾಂಜಾಗಿಡಗಳನ್ನು ಬೆಳೆಸಿ, ಅವುಗಳಿಗೆ ಗೊಬ್ಬರ ಹಾಕಿ ಪೋಷಣೆ ಮಾಡಿ ಬೆಳೆಸಿರುವು ದನ್ನು ಪತ್ತೆ ಹಚ್ಚಿದ ಗ್ರಾಮಾಂತರ ಠಾಣಾ ಪೊಲೀಸರು ಗಾಂಜಾ ಗಿಡಗಳನ್ನು ವಶಕ್ಕೆ ಪಡೆದು ನಾರಾಯಣಸ್ವಾಮಿ ಎಂಬಾತನನ್ನು ಬಂಧಿಸಿದ್ದಾರೆ.
ತಾಲ್ಲೂಕಿನ ತೂಬಗೆರೆ ಹೋಬಳಿ, ಗೆದ್ದಲಪಾಳ್ಯ ಗ್ರಾಮದ ನಿವಾಸಿ ನಾರಾಯಣಸ್ವಾಮಿ ಬಿನ್ ಯಲ್ಲಪ್ಪ ಅವರು ಸದರಿ ಗ್ರಾಮದ ಜಮೀನಿನಲ್ಲಿ ಗಾಂಜಾ ಗಿಡಗಳನ್ನು ಬೆಳೆದಿರುತ್ತಾನೆಂದು ಬಂದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ, ಸುಮಾರು 92 ಸಾವಿರ ರೂ. ಮೌಲ್ಯದ 8 ಕೆಜಿ 700 ಗ್ರಾಂ ತೂಕದ, ಒಟ್ಟು 568 ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿದ್ದಾರೆ.ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಚಂದ್ರಶೇಖರ್, ಫೈರೋಜ್ ಮುತ್ತುರಾಜು ಹರೀಶ್ ಮುಂತಾದವರು ಪಾಲ್ಗೊಂಡಿದ್ದರು.