ನವಿ ಮುಂಬೈ(ಮಹಾರಾಷ್ಟ್ರ): ಇಂದು ಬೆಳಗ್ಗೆ ನವಿ ಮುಂಬೈನ ಬೆಲಾಪುರ್ ಪ್ರದೇಶದಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿದು ಬಿದ್ದು, ಹಲವಾರು ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸರು, ಅಗ್ನಿಶಾಮಕ ದಳ ಮತ್ತು ಎನ್ಡಿಆರ್ಎಫ್ ತಂಡ ಸ್ಥಳದಲ್ಲಿದ್ದು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.
ಮುಂಜಾನೆ ೫ ಗಂಟೆ ಸುಮಾರಿಗೆ ಕಟ್ಟಡ ಕುಸಿದಿದೆ ಎಂದು ನವಿ ಮುಂಬೈ ಮಹಾನಗರ ಪಾಲಿಕೆ ಆಯುಕ್ತ…ಕೈಲಾಸ್ ಶಿಂಧೆ ತಿಳಿಸಿದ್ದಾರೆ. ಇದು ನೆಲಮಹಡಿ ಸೇರಿದಂತೆ ೪ ಅಂತಸ್ತಿನ ಕಟ್ಟಡವಾಗಿದ್ದು, ಶಹಬಾಜ್ ಗ್ರಾಮವು ಬೇಲಾಪುರ್ ವಾರ್ಡ್ ವ್ಯಾಪ್ತಿಗೆ ಬರುತ್ತದೆ. ಕಟ್ಟಡದಲ್ಲಿ ೧೩ ಫ್ಲಾಟ್ಗಳಿದ್ದವು.
ಅವಶೇಷಗಳಡಿಯಿಂದ ಇಬ್ಬರನ್ನು ರಕ್ಷಿಸಲಾಗಿದೆ ಹಲವರು ಸಿಲುಕಿರುವ ಸಾಧ್ಯತೆಯಿದೆ.
ಎನ್ಡಿಆರ್ಎಫ್ ತಂಡಗಳು ಸ್ಥಳದಲ್ಲಿವೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ” ಎಂದು ಸುದ್ದಿಗಾರರೊಂದಗೆ ಮಾತನಾಡಿದ ಶಿಂಧೆ ಹೇಳಿದ್ದಾರೆ.
ರಕ್ಷಿಸಲ್ಪಟ್ಟ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಕೈಲಾಸ್ ಶಿಂಧೆ ತಿಳಿಸಿದ್ದಾರೆ. ಇದು ೧೦ ವರ್ಷಗಳ ಹಳೆಯ ಕಟ್ಟಡ. ತನಿಖೆ ನಡೆಯುತ್ತಿದೆ. ಕಟ್ಟಡದ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು” ಎಂದು ನವಿ ಮುಂಬೈ ಮಹಾನಗರ ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.