ನವದೆಹಲಿ: ಗೇಟ್ವೇ ಆಫ್ ಇಂಡಿಯಾ ಬಳಿ ಪ್ರಯಾಣಿಕರಿದ್ದ ದೋಣಿಗೆ ಸ್ಪೀಡ್ಬೋಟ್ ಡಿಕ್ಕಿ ಹೊಡೆದು 13 ಮಂದಿ ಪ್ರಯಾಣಿಕರು ಮೃತಪಟ್ಟ ಘಟನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತೀವ್ರ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.
ದುರ್ಘಟನೆ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಮುಂಬೈನಲ್ಲಿ ದೋಣಿ ಅಪಘಾತದಲ್ಲಿ ಸಾವನ್ನಪ್ಪಿದ ಪ್ರತಿಯೊಬ್ಬರ ಕುಟುಂಬಕ್ಕೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂಪಾಯಿಗಳ ಪರಿಹಾರವನ್ನು ಪ್ರಧಾನಿ ಘೋಷಿಸಿದ್ದಾರೆ. ಗಾಯಗೊಂಡವರಿಗೆ 50,000 ರೂಪಾಯಿಗಳನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.