ಬೆಂಗಳೂರು: ಶೀಘ್ರದಲ್ಲಿಯೇ ಆರಂಭವಾಗಲಿರುವ ವಿಧಾನಮಂಡಲ ಅಧಿವೇಶನದಲ್ಲಿ ಸರ್ಕಾರಕ್ಕೆ ಎದುರಾಗುವ ಮುಜುಗರ ತಪ್ಪಿಸಿಕೊಳ್ಳಲು ಸರ್ಕಾರ ಮುಂದಾಗಿದೆ.
ಇತ್ತೀಚೆಗೆ ದೊಡ್ಡ ಪ್ರಮಾಣದಲ್ಲಿ ಸದ್ದು ಮಾಡುತ್ತಿರುವ ಮೂಡಾ ಅಕ್ರಮಕ್ಕೆ ಸಂಬಂಧಪಟ್ಟಂತೆ ಮೈಸೂರು ನಗರಾಭಿವೃದ್ಧಿ ಇಲಾಖೆಯಿಂದ ನಿವೇಶನ 50:50 ಅನುಪಾತ ಸೇರಿದಂತೆ ಹಲವು ಅಕ್ರಮದ ಹಿನ್ನೆಲೆ ಸರ್ಕಾರದ ವಿರುದ್ಧ ವಿಪಕ್ಷಗಳು ಮುಗಿಬಿದ್ದಿವೆ.ಜುಲೈ 15 ರಿಂದ ಆರಂಭವಾಗಲಿರುವ ಮುಂಗಾರು ಅಧಿವೇಶನದಲ್ಲಿ ಸರ್ಕಾರಕ್ಕೆ ಮೂಡಾದಲ್ಲಿನ ಅಕ್ರಮ ಮುಂದಿಟ್ಟುಕೊಂಡು ಮುಜುಗರಕ್ಕೆ ಸಿಲುಕಿಸಲು ವಿಪಕ್ಷಗಳುಸಜ್ಜಾಗುತ್ತಿರುವ ಹಿನ್ನೆಲೆಯಲ್ಲಿ ಮುಜುಗರ ತಪ್ಪಿಸಿಕೊಳ್ಳಲು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರನ್ನು ಎತ್ತಂಗಡಿ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.
ಡಾ.ಕೆ.ವಿ.ರಾಜೇಂದ್ರ ಜಾಗಕ್ಕೆ ಜಿ. ಲಕ್ಷ್ಮೀಕಾಂತ ರೆಡ್ಡಿ ನಿಯೋಜನೆ ಮಾಡಲಾಗಿದ್ದು, ಅಕ್ರಮ ದೊಡ್ಡ ಪ್ರಮಾಣದಲ್ಲಿ ಸರ್ಕಾರಕ್ಕೆ ಮುಜುಗರ ತರಲಿದೆ ಎಂಬ ಕಾರಣಕ್ಕೆ ಇದರಿಂದ ತಪ್ಪಿಸಿಕೊಳ್ಳಲೆಂದೇ ಡಾ. ಕೆ.ವಿ.ರಾಜೇಂದ್ರ ವರ್ಗಾವಣೆ ಮಾಡಲಾಗಿದೆ ಎಂದು ಚರ್ಚೆಗಳು ನಡೆದಿವೆ.