ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಕೆ. ಮರಿಗೌಡ ರಾಜೀನಾಮೆ ನೀಡಿದ್ದಾರೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆಯಂತೆ ಕೆ. ಮರಿಗೌಡ ಅವರು ಅಧ್ಯಕ್ಷ ಸ್ಥಾನವನ್ನು ತ್ಯಜಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಮುಡಾದಲ್ಲಿ ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವರ ಮೇಲೆ ಹಗರಣಗಳ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ಮುಜುಗರ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಮರಿಗೌಡ ಅವರು ಸಿದ್ದರಾಮಯ್ಯ ಅವರೊಂದಿಗೆ ಸಮಾಲೋಚನೆ ನಡೆಸಿದ್ದು,ಇಂದು ಬೆಂಗಳೂರಿನ ವಿಕಾಸಸೌಧದಲ್ಲಿ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ದೀಪಚೋಳನ್ ಅವರಿಗೆ ಮರಿಗೌಡ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.



