ಬೆಂಗಳೂರು-ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಪಟ್ಟಂತೆ ಲೋಕಾಯುಕ್ತ ತನಿಖೆಯ ಮಧ್ಯಂತರ ವರದಿಯನ್ನು ಇಂದು ಹೈಕೋರ್ಟ್ಗೆ ಸಲ್ಲಿಸಲಾಗುವುದು ಎಂದು ಹೇಳಲಾಗಿದೆ.ಈ ಮಧ್ಯೆ ಸಿಬಿಐ ತನಿಖೆಗೆ ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಾಳೆ ನಡೆಯಲಿದೆ ಎಂದು ತಿಳಿದುಬಂದಿದೆ.
ತನಿಖೆಗೆ ಸಂಬಂಧಪಟ್ಟಂತೆ ತನಿಖೆ ನಡೆಸುತ್ತಿರುವ ಲೋಕಾಯುಕ್ತ ಅಧಿಕಾರಿಗಳ ನಡೆ ಹಲವು ಅನುಮಾನಗಳಿಗೆ ಕಾರಣವಾಗಿದೆ ಹಾಗಾಗಿ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕೆಂದು ದೂರುದಾರ ಸ್ನೇಹಮಯಿ ಕೃಷ್ಣ ಇಂದು ಮೈಸೂರಿನಲ್ಲಿ ಮತ್ತೊಮ್ಮೆ ಒತ್ತಾಯಿಸಿದ್ದಾರೆ.
ಪ್ರತಿನಿಧಿಯೊಂದಿಗೆ ಮಾನಾಡಿರುವ ಕೃಷ್ಣ, ಜೂನ್ 28ರಂದು ಲೋಕಾಯುಕ್ತ ಕಚೇರಿ ಮೇಲೆ ದಾಳಿ ನಡೆಸಲು ಸರ್ಚ್ ವಾರಂಟ್ ಜಾರಿಯಾಗಿದ್ದರೂ ಡಿವೈಎಸ್ಪಿ ಮಾಲತೇಶ್ ಎಸ್ ಕೆ ಆದೇಶವನ್ನು ಪಾಲಿಸಿಲ್ಲ, ದಾಳಿಗೆ ಮೊದಲೇ ವಿಷಯವನ್ನು ನಗರಾಭಿವೃದ್ಧಿ ಸಚಿವರಿಗೆ ವಿಷಯವನ್ನು ತಿಳಿಸಲಾಗಿದೆ, ಭೈರತಿ ಸುರೇಶ್ ಚಾಪರ್ನಲ್ಲಿ ಬಂದು ದಾಖಲೆಗಳನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ಕೃಷ್ಣ ಹೇಳಿದರು.