ಬೆಂಗಳೂರು: ಮೂಡಾದಲ್ಲಿ ನಡೆದಿರುವ ಬಹುಕೋಟಿ ಹಗರಣವನ್ನ ಜಾರಿ ನಿರ್ದೇಶನಾಲಯ ತನಿಖೆ ಮಾಡುತ್ತಿದೆ. ಇ.ಡಿ. ಅಧಿಕಾರಿಗಳು ಮೈಸೂರಿನ ಮೂಡಾ ಕಚೇರಿಗೆ, ತಾಲ್ಲೂಕು ಕಚೇರಿಗೆ ಭೇಟಿ ನೀಡಿ ದಾಖಲೆಗಳ ಪರಿಶೀಲನಾ ಕಾರ್ಯ ನಡೆಸುತ್ತಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳನ್ನೂ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ.
ಪ್ರಕರಣ ಸಂಬಂಧ ಟ್ವಿಟ್ ಮಾಡಿರುವ ಅವರು, ಇಡಿ ತನಿಖೆ ಇಷ್ಟೊಂದು ಚುರುಕುಗೊಂಡಿರುವ ಪರಿಸ್ಥಿತಿಯಲ್ಲಿ ಇಡೀ ಪ್ರಕರಣ ಮತ್ತೊಂದು ಮಜಲು ತಲುಪಿದಂತಾಗಿದೆ. ಅಧಿಕಾರದ ಅತ್ಯುನ್ನತ ಸ್ಥಾನದಲ್ಲಿರುವವರು, ಅವರ ಕುಟುಂಬ ಸದಸ್ಯರು, ಹಿರಿಯ ಅಧಿಕಾರಿಗಳು ಈ ಪ್ರಕರಣದಲ್ಲಿ ಆರೋಪಿಗಳಾಗಿರುವುದರಿಂದ, ಈ ಪ್ರಕರಣ ಎಷ್ಟು ಗಂಭೀರವೋ ಅಷ್ಟೆ ಸೂಕ್ಷ್ಮವೂ ಆಗಿದೆ ಎಂದಿದ್ದಾರೆ.
ಈ ನಿಟ್ಟಿನಲ್ಲಿ, ನಿಷ್ಪಕ್ಷಪಾತ ಮತ್ತು ಪಾರದರ್ಶಕ ತನಿಖೆಯ ದೃಷ್ಟಿಯಿಂದ, ಈ ಪ್ರಕರಣಕ್ಕೆ ಸಂ- ಬಂಧಪಟ್ಟ ಎಲ್ಲ ಅಧಿಕಾರಿಗಳು, ಆರೋಪಿಗಳು
ಹಾಗೂ ಸಂಭವನೀಯ ಸಾಕ್ಷಿದರರ ಪಾಸ್ ಪೋರ್ಟ್ ಗಳನ್ನು ಈ ಕೂಡಲೇ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕರಲ್ಲಿ ಮನವಿ ಮಾಡಿದ್ದಾರೆ.