ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬAಧಪಟ್ಟAತೆ ಮುಡಾದ ಮಾಜಿ ಅಧ್ಯಕ್ಷ ಮರಿಗೌಡ ಅವರು ಇಂದು ಜಾರಿ ನಿರ್ದೇಶನಾಲಯದ ವಿಚಾರಣೆಗೆ ಹಾಜರಾಗಿದ್ದಾರೆ.
ಬೆಂಗಳೂರಿನ ಶಾಂತಿನಗರದಲ್ಲಿರುವ ಇಡಿ ಕಚೇರಿಗೆ ವಿಚಾರಣೆ ಎದುರಿಸಲು ಮರಿಗೌಡ ಹಾಜರಾದರು. ನಿನ್ನೆ ಈ ಹಿಂದೆ ಮೈಸೂರು ಜಿಲ್ಲಾಧಿಕಾರಿಗಿದ್ದ, ಹಾಲಿ ಸಂಸದ ಕುಮಾರ್ ನಾಯ್ಕ್ ಅವರು ಇ.ಡಿ. ವಿಚಾರಣೆ ಎದುರಿಸಿದ್ದಾರೆ.
ಮೊನ್ನೆ ಸಿದ್ದರಾಮಯ್ಯ ಅವರ ಆಪ್ತ ಸಹಾಯಕರೆನ್ನಲಾದ ಕುಮಾರ್ ಎಂಬುವರು ಸಹ ವಿಚಾರಣೆಗೆ ಹಾಜರಾಗಿದ್ದರು. ಮುಡಾ ಪ್ರಕರಣದ ಇಡಿ ವಿಚಾರಣೆ ಬಹುತೇಕ ಮುಕ್ತಾಯ ಹಂತದಲ್ಲಿದೆ ಎಂದು ಮುಖ್ಯಮಂತ್ರಿಯವರನ್ನು ಸಹ ವಿಚಾರಣೆಗೆ ಒಳಪಡಿಸಲಾಗುವುದು ಎಂದು ಹೇಳಲಾಗುತ್ತಿದೆ.