ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಬಿಐ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ನಲ್ಲಿಂದು ಡಿಸೆಂಬರ್ 10ಕ್ಕೆ ಮುಂದೂಡಲಾಗಿದೆ.
ಅರ್ಜಿ ವಿಚಾರಣೆ ಇಂದು ಕೈಗೆತ್ತಿಕೊಂಡ ಸಂದರ್ಭದಲ್ಲಿ ದೇವರಾಜ್ ಪರ ವಕೀಲರಾದ ದುಶ್ಯಾಂತ್ ದವೆ ಅವರು ಮೇಲ್ಮನವಿ ಸಲ್ಲಿಸಿರುವ ಅರ್ಜಿ ವಿಚಾರಣೆ ಡಿ.5ಕ್ಕೆ ಇರುವ ಹಿನ್ನೆಲೆಯಲ್ಲಿ ಸಿಬಿಐ ತನಿಖೆ ಕೋರಿರುವ ಅರ್ಜಿವಿಚಾರಣೆಯನ್ನು ಡಿಸೆಂಬರ್ 9ಕ್ಕೆ ಮುಂದೂಡುವಂತೆ ಮನವಿ ಮಾಡಿದರು.
ಆದರೆ ಸ್ನೇಹಮಯಿ ಕೃಷ್ಣ ಪರ ವಕೀಲರಾದ ರಾಘವನ್ ಅವರು ಇಂದೇ ನಡೆಸುವಂತೆ ಮನವಿ ಮಾಡಿದರು. ನ್ಯಾಯಮೂರ್ತಿಗಳು ಸಿಬಿಐ ತನಿಖೆ ಕೋರಿರುವ ಅರ್ಜಿ ವಿಚಾರಣೆಯನ್ನು ಡಿಸೆಂಬರ್ 10ಕ್ಕೆ ಮುಂದೂಡಿದರು.