ಲಕ್ನೋ: ನಿಷೇಧಿತ ಸಂಘಟನೆ ಖಲಿಸ್ತಾನ್ ಕಮಾಂಡೋ ಪೋರ್ಸ್ನ (ಖಲಿಸ್ತಾನ್ ಜಿಂದಾಬಾದ್ ಫೋರ್ಸ್) ಮೂವರು ಭಯೋತ್ಪಾದಕರನ್ನು ಉತ್ತರ ಪ್ರದೇಶದ ಪಿಲಿಭಿತ್ ಜಿಲ್ಲೆಯಲ್ಲಿ ಪೊಲೀಸರು ಎನ್ಕೌಂಟರ್ ಮಾಡಿದ್ದಾರೆ. ಇಂದು ಮುಂಜಾನೆ ಈ ಘಟನೆ ನಡೆದಿದೆ ಎಂದುಪೊಲೀಸರು ಹೇಳಿದ್ದಾರೆ.
ಎನ್ಕೌಂಟರ್ನಲ್ಲಿ ಹತರಾದ ಖಲಿಸ್ತಾನಿ ಭಯೋತ್ಪಾದಕರನ್ನು ಗುರ್ವಿಂದರ್ ಸಿಂಗ್ (25), ವೀರೇಂದ್ರ ಸಿಂಗ್ ಅಲಿಯಾಸ್ ರವಿ (23), ಮತ್ತು ಜಸ್ಪ್ರೀತ್ ಸಿಂಗ್ ಅಲಿಯಾಸ್ ಪ್ರತಾಪ್ ಸಿಂಗ್ (18) ಎಂದು ಗುರುತಿಸಿದೆ. ಹತರು ಪಂಜಾಬ್ನ ಗುರುದಾಸ್ಪುರ ಜಿಲ್ಲೆಯ ಪೊಲೀಸ್ ಪೋಸ್ಟ್ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದರು ಎಂಬ ಸ್ಫೋಟಕ ವಿಚಾರ ಬೆಳಕಿಗೆ ಬಂದಿದೆ.
ಎನ್ಕೌಂಟರ್ ನಂತರ ಪೊಲೀಸರು ಎರಡು ಎಕೆ -47 ರೈಫಲ್ಗಳು, ಎರಡು ಗ್ಲಾಕ್ ಪಿಸ್ತೂಲ್ಗಳು ಮತ್ತು ಹಲವು ಮ್ಯಾಕ್ಸಿನ್ ಜೀವಂತ ಗುಂಡುಗಳನ್ನು ಮೃತರಿಂದ ಪೊಲೀಸರು ವಶಪಡಿಸಿಕೊಂಡಿದ್ದಾರೆ.ಪಿಲಿಭಿತ್ ಜಿಲ್ಲೆಯ ಪುರನ್ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಪ್ರದೇಶದಲ್ಲಿ ಮೂವರುಆರೋಪಿಗಳ ಉಪಸ್ಥಿತಿಯ ಬಗ್ಗೆ ಪಂಜಾಬ್ ಪೊಲೀಸರ ತಂಡವು ಪಿಲಿಭಿತ್ ಪೊಲೀಸರಿಗೆ ಮಾಹಿತಿ ನೀಡಿದ್ದು, ನಂತರ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ. ಮೂವರು ವ್ಯಕ್ತಿಗಳು ಪುರನ್ಪುರದಲ್ಲಿ ಅನುಮಾನಾಸ್ಪದ ವಸ್ತುಗಳೊಂದಿಂಗೆ ಸಂಚರಿಸುವ ಬಗ್ಗೆ ಪೊಲೀಸರಿಗೆ ಸುಳಿವು ಸಿಕ್ಕಿತ್ತು.