ಈಗಿನ ಮೆಜೆಸ್ಟಿಕ್ ಏರಿಯಾ ಹೇಗಿದೆ, ಅಲ್ಲಿ ನಡೆಯುವ ದಂಧೆಗಳು, ಅಕ್ರಮ ಚಟುವಟಿಕೆಗಳು ಅಲ್ಲದೆ ಈಗಲೂ ಅಲ್ಲಿ ರೌಡಿಸಂ ಹೇಗೆ ನಡೆಯುತ್ತೆ ಎಂಬುದನ್ನು ಅಲ್ಲಿಯೇ ಹುಟ್ಟಿ ಬೆಳೆದ ಹುಡುಗನೊಬ್ಬನ ಕಥೆಯನ್ನು ಮೆಜೆಸ್ಟಿಕ್-2 ಚಿತ್ರದ ಮೂಲಕ ನಿರ್ದೇಶಕ ರಾಮು ಹೇಳಹೊರಟಿದ್ದಾರೆ.
ಹೀಗೆ ಸಾಮಾನ್ಯ ಜನರಿಗೆ ಗೊತ್ತಿಲ್ಲದಂಥ ಅನೇಕ ಚಟು ವಟಿಕೆಗಳನ್ನು ಮೆಜೆಸ್ಟಿಕ್-2 ಅನಾವ ರಣಗೊಳಿಸಲಿದೆ. ಇದೀಗ ಈ ಚಿತ್ರದ ಚಿತ್ರೀಕರಣ ಯಶಸ್ವಿಯಾಗಿ ಮುಗಿದಿದೆ.ಅಮ್ಮಾ ಎಂಟರ್ ಪ್ರೈಸಸ್ ಮೂಲಕ ಚಿತ್ರದುರ್ಗದ ಹೆಚ್.ಆನಂದಪ್ಪ ಅವರ ನಿರ್ಮಾಣದ ಈ ಚಿತ್ರಕ್ಕೆ ರಾಮು ಅವರೇ ಕಥೆ, ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಯುವನಟ ಭರತ್, ಸಂಹಿತಾ ವಿನ್ಯಾ ನಾಯಕ, ನಾಯಕಿ ಪಾತ್ರ ನಿರ್ವಹಿಸಿದ್ದಾರೆ.
ಮೋಷನ್ ಪೋಸ್ಟರ್ ಬಿಡುಗಡೆಯ ಜೊತೆ ಶೂಟಿಂಗ್ ಅನುಭವಗಳ ಹೇಳಿಕೊಳ್ಳಲು ಇಡೀ ಚಿತ್ರತಂಡ ಮಾಧ್ಯಮದ ಮುಂದೆ ಹಾಜರಾಗಿತ್ತು.
ಮೊದಲಿಗೆ ಮಾತನಾಡಿದ ನಿರ್ಮಾಪಕ ಹೆಚ್. ಆನಂದಪ್ಪ, ಮಾರ್ಚ್ 31ಕ್ಕೆ ನಮ್ಮ ಚಿತ್ರದ ಶೂಟಿಂಗ್ ಆರಂಭಿಸಿ, ಬೆಂಗಳೂರು ಸುತ್ತಮುತ್ತ ನಿರಂತರವಾಗಿ, ಅಲ್ಲದೆ ಮರುಘಾ ಮಠದಲ್ಲಿ ಡ್ಯುಯೆಟ್ ಸಾಂಗ್ ಚಿತ್ರೀಕರಣ ಮಾಡಿದ್ದು, ಅಂ ದುಕೊಂಡಂತೆಯೇ ಮುಗಿದಿದೆ. ಇಡೀ ಸಿನಿಮಾ ಶೂಟಿಂಗ್ನಲ್ಲಿ ನಾನೇ ಜೊತೆ ಇದ್ದು ನೋ ಡಿದ್ದೇನೆ. ಸಿನಿಮಾ ತುಂಬಾ ಚೆನ್ನಾಗಿ ಬಂದಿದೆ ಎಂದರು.
ನಿರ್ದೇಶಕ ರಾಮು ಮಾತನಾಡಿ ಸತತವಾಗಿ 126 ದಿನ ಶೂಟಿಂಗ್ ಮಾಡಿದ್ದೇವೆ. ನನ್ನ ಸಬ್ಜೆಕ್ಟ್ ಕೇಳಿ ಅವಕಾಶ ಕೊಟ್ಟಿದ್ದು ಆನಂದಪ್ಪ ಅವರು. ನಾನು ಏನು ಕೇಳಿದೆನೋ ಅದೆಲ್ಲವನ್ನೂ ಒದಗಿಸಿಕೊಟ್ಟು ಸಹಕರಿಸಿದ್ದಾರೆ. ಮೊದಲ ಚಿತ್ರಕ್ಕೇ ಇಂಥ ನಿರ್ಮಾಪಕರು ಸಿಕ್ಕಿದ್ದು ನನ್ನ ಅದೃಷ್ಟ. ಈಗ ಡಬ್ಬಿಂಗ್ ಆರಂಭಿಸಬೇಕಿದೆ. ಚಿತ್ರವನ್ನು ಡಿಸೆಂಬರ್ 26ಕ್ಕೆ ರಿಲೀಸ್ ಮಾಡಬೇಕೆಂಬ ಪ್ಲಾನಿದೆ. ನಾನು, ಭರತ್ ಇಬ್ಬರೂ ದರ್ಶನ್ ಅಭಿಮಾನಿಗಳು.
ರಿಲೀಸ್ ಟೈಮಲ್ಲಿ ಮೈಸೂರಿನಿಂದ ಬೆಂಗಳೂರುವರೆಗೆ 101 ಸ್ಟಾರ್ಸ್ ಮೆರವಣಿಗೆ ಮಾಡಿಸಬೇಕು, ದರ್ಶನ್ ಅವರ 101 ಅಡಿ ಕಟೌಟ್ ಹಾಕಬೇಕು ಎಂಬ ಪ್ಲಾನಿದೆ ಎಂದರು.ಈ ಚಿತ್ರಕ್ಕೆ ರಾಮೋಹಳ್ಳಿ, ಹೆಚ್.ಎಂ.ಟಿ., ಮಾಕಳಿ ಬಳಿಯ ಸಕ್ರೆ ಅಡ್ಡ, ಆರ್.ಟಿ.ನಗರದ ನಿಸರ್ಗ ಹೌಸ್ ಸೇರಿದಂತೆ ಬಹುತೇಕ ಬೆಂಗ ಳೂರು ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ.ರೌಡಿಸಂ ಹಾಗೂ ಆಕ್ಷನ್ ಬೇಸ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಹಿರಿಯನಟಿ ಶೃತಿ ಅವರು ತಾಯಿಯ ಪಾತ್ರ ನಿರ್ವಹಿಸಿದ್ದಾರೆ. ಇನ್ನು ಈ ಚಿತ್ರಕ್ಕೆ ವಿನು ಮನಸು ಅವರ ಸಂಗೀತ ನಿರ್ದೇಶನವಿದೆ.