ಬೆಂಗಳೂರು: ಬೆಂಗಳೂರು ಮಹಾನಗರದಲ್ಲಿ ಸಂಚರಿಸುವ ಮೆಟ್ರೋ ರೈಲು ಪ್ರಯಾಣ ದರವನ್ನು ಹೆಚ್ಚಿಸಲು ಬಿಎಂಆರ್ಸಿಎಲ್ ನಿರ್ಧರಿಸಿದೆ.ಹಲವಾರು ವರ್ಷಗಳಿಂದ ಮೆಟ್ರೋ ಪ್ರಯಾಣದರ ಏರಿಕೆ ಮಾಡದಿರುವ ಹಿನ್ನೆಲೆಯಲ್ಲಿ ಇದೀಗ ಪ್ರಯಾಣದರವನ್ನು ಹೆಚ್ಚಳ ಮಾಡಲು ನಿರ್ಧರಿಸಿರುವ ಸಂಸ್ಥೆ ಇದಕ್ಕಾಗಿ ದರ ನಿಗದಿ ಮಾಡಲು ಸಮಿತಿಯೊಂದನ್ನು ರಚಿಸಿದೆ ಎಂದು ಹೇಳಲಾಗಿದೆ.
ಆಗಸ್ಟ್ 21ರವರೆಗೆ ಮೆಟ್ರೋ ರೈಲು ಪ್ರಯಾಣಿಕರ ಸಲಹೆ ಹಾಗೂ ಅಭಿಪ್ರಾಯಗಳನ್ನು ಸಂಗ್ರಹಿಸಲಿರುವ ಸಮಿತಿ ತದನಂತರ ಪ್ರಯಾಣ ದರವನ್ನು ನಿಗದಿ ಮಾಡಲಿದೆ ಎಂದು ತಿಳಿದುಬಂದಿದೆ.ಶೇ. 15ರಿಂದ 20ರಷ್ಟು ಪ್ರಯಾಣದರ ಹೆಚ್ಚಳ ಮಾಡಲು ಚಿಂತನೆ ನಡೆಸಿದೆ ಎನ್ನಲಾಗಿದೆ.