ಮೈಸೂರು: ಮುಡಾ ನಿವೇಶನ ಪ್ರಕರಣ ಮರೆಯಾಗುತ್ತಿದ್ದಂತೆ ಸಿದ್ದರಾಮಯ್ಯ ಆರೋಗ್ಯ ಮಾರ್ಗ ರಸ್ತೆ ನಾಮಕರಣ ವಿವಾದ ಮುನ್ನಲೆಗೆ ಬಂದಿದೆ. ಪ್ರಿನ್ಸಸ್ ರಸ್ತೆಗೆ ದಾಖಲೆ ಇಲ್ಲವೆಂದು ಕಾಂಗ್ರೆಸ್ ಮುಖಂಡರು ವಾದಿಸುತ್ತಿದ್ದಾರೆ. ಆದರೆ ಇದೀಗ ಪ್ರಿನ್ಸೆಸ್ ರಸ್ತೆ ಎಂಬುದಕ್ಕೆ ದಾಖಲೆಗಳಿವೆ ಎಂದು ಮ್ಯಾಪ್, ಪತ್ರ ವ್ಯವಹಾರದ ದಾಖಲೆಗಳನ್ನು ಹಂಚಿಕೊಳ್ಳುವ ಮೂಲಕ ರಸ್ತೆಗೆ ಸಿದ್ದರಾಮಯ್ಯ ಹೆಸರಿಡುವುದನ್ನು ಬಿಜೆಪಿ ಸಂಸದ ಯದುವೀರ್ ವಿರೋಧ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಂಸದ ಯದುವೀರ್, ಕೆಆರ್ಎಸ್ ರಸ್ತೆಗೆ ಅಧಿಕೃತ ಹೆಸರು ನೀಡಿರುವ ಉಲ್ಲೇಖಗಳಿಲ್ಲ ಎಂದು ಹೇಳುತ್ತಿರುವ ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರೇ, ಈ ದಾಖಲೆಗಳನ್ನೊಮ್ಮೆ ನೋಡಿ ಎಂದಿದ್ದಾರೆ.