ನೆಲಮಂಗಲ: ಸೋಲೂರು ಹೋಬಳಿ ಮೋಟಗೊಂಡನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಮಹಿಳಾ ಮತ್ತು ಮಕ್ಕಳ ಗ್ರಾಮ ಸಭೆ ಹಾಗೂ 2024-25ನೇ ಸಾಲಿನ ಗ್ರಾಮಸಭೆಯನ್ನು ವಿವಿಧ ಇಲಾಖೆಯ ಅಧಿಕಾರಿಗಳು, ಜನಪ್ರತಿನಿಧಿಗಳ ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ಆಯೋಜಿಸಲಾಗಿತ್ತು.
ಸಭೆಗೆ ಅನೇಕ ಇಲಾಖೆಯ ಅಧಿಕಾರಿಗಳು ಬಾರದ ಕಾರಣ, ಸರ್ಕಾರದ ವಿವಿಧ ಇಲಾಖೆ ಅಧಿಕಾರಿಗಳು ಜನಪ್ರತಿನಿಧಿಗಳು ಮತ್ತು ಗ್ರಾಮಸ್ಥರ ಸಮ್ಮುಖದಲ್ಲಿ ನಡೆಯಬೇಕಿದ್ದ ಗ್ರಾಮಸಭೆಯಲ್ಲಿ ಅಧಿಕಾರಿಗಳು ಭಾಗವಹಿಸದೆ ಕಾಟಾಚಾರಕ್ಕೆ ನಡೆಯುತ್ತಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ ಮುಂದಿನಸಭೆಗಳಿಗೆ ಹಾಜರಾಗಲು ಸಂಬಂದಿಸಿದ ಇಲಾಖೆಯವರಿಗೆ ಪತ್ರವ್ಯವಹಾರ ಮಾಡುವಂತೆ ಹಾಜರಿದ್ದ ಗ್ರಾಮಸ್ಥರು ತಿಳಿಸಿದರು. ಸಭೆಯಲ್ಲಿ ಹಾಜರಿದ್ದ ವಿವಿಧ ಇಲಾಖೆಯ ಅಧಿಕಾರಿಗಳು ತಮ್ಮ ತಮ್ಮ ಇಲಾಖೆಯ ಮಾಹಿತಿಯನ್ನು ಸಮಗ್ರವಾಗಿ ಸಭೆಯಲ್ಲಿ ತಿಳಿಸಿದರು.
ಸಭೆಯಲ್ಲಿ ಆಸ್ಪತ್ರೆಯ ಅವ್ಯವಸ್ಥೆ ಬಗ್ಗೆ ಧ್ವನಿ ಎತ್ತಿದ ಗ್ರಾಮಸ್ಥರು ಗ್ರಾಮದಲ್ಲಿ ಆಸ್ಪತ್ರೆಯಲ್ಲಿ ಸರಿಯಾದ ವ್ಯವಸ್ಥೆ ಇಲ್ಲದೆ ಸಾರ್ವಜನಿಕರಿಗೆ ಆಗುತ್ತಿರುವ ಸಾಕಷ್ಟು ತೊಂದರೆಗಳ ಬಗ್ಗೆ
ಆಕ್ರೋಶ ವ್ಯಕ್ತಪಡಿಸಿ ಶೀಘ್ರದಲ್ಲೇ ಸಾರ್ವಜನಿಕರಿಗೆ ಆಸ್ಪತ್ರೆಯಿಂದ ಅನುಕೂಲವಾಗುವಂತೆ ವ್ಯವಸ್ಥೆ ಕಲ್ಪಿಸಬೇಕೆಂದು ಆಗ್ರಹಿಸಿಗ್ರಾಮದ ಹಲವು ಸಮಸ್ಯೆಗಳ ಬಗ್ಗೆ ಚರ್ಚಿಸಿ ಮೂಲಭೂತ ಸೌಕರ್ಯ ಒದಗಿಸಿ ಕೊಡುವಂತೆ ಒತ್ತಾಯಿಸಿದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಗ್ರಾಮ ಪಂಚಾಯತಿ ಅಧ್ಯಕ್ಷ ಎಂ ಆರ್ ಶಿವಕುಮಾರ್ ಮಾತಾನಾಡಿ ಸಭೆಯಲ್ಲಿ ಚರ್ಚೆಯಾದ ಎಲ್ಲಾ ವಿಷಯಗಳನ್ನು ಈಗಾಗಲೇ ನೋಂದಣಿ ಪುಸ್ತಕದಲ್ಲಿ ನೋಂದಾಯಿಸಲಾಗಿದೆ. ಅದರ ಮುಖೇನ ಸಂಬಂಧಿಸಿದ ಇಲಾಖೆಯವರಿಗೆ ಪತ್ರವ್ಯವಹಾರ ಮಾಡಲಾಗುವುದು. ಅದರಂತೆ ಗ್ರಾಮದ ಅಭಿವೃದ್ಧಿಗೆ ಪೂರಕವಾದ ಯೋಜನೆಯನ್ನು ಕೈಗೊಳ್ಳಲಾಗುವುದು ಈ ಸಭೆಗೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಕೆಲವು ಮುಖಂಡರು ಗೈರಾಗಿರುವುದು ಕಂಡುಬಂದಿದ್ದು ಮುಂದಿನ ಸಭೆಯಲ್ಲಿ ಎಲ್ಲಾ ಇಲಾಖೆ ಅಧಿಕಾರಿಗಳು ಮುಖಂಡರನ್ನು ಸೇರಿಸಿ ಸಭೆ ನಡೆಸಲಾಗುವುದು ಎಂದರು.
ಗ್ರಾಮ ಸಭೆ ಜೊತೆಯಲ್ಲಿ ಮಹಿಳಾ ಮತ್ತು ಮಕ್ಕಳ ಗ್ರಾಮ ಸಭೆ ಆಯೋಜಿಸಿದ್ದು ಮಕ್ಕಳಿಗೆ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲು ಈ ಸಭೆ ಉತ್ತಮ ವೇದಿಕೆಯಾಗಿದೆ. ಅಲ್ಲದೆ, ಅಧಿಕಾರಿಗಳಿಗೆ ಮಕ್ಕಳಿಂದ ಸಮಸ್ಯೆ ಕೇಳುವುದೇ ಅದ್ಭುತಅನುಭವ ಚಿಕ್ಕ ವಯಸ್ಸಿನಲ್ಲಿಯೇ ಮಕ್ಕಳಿಗೆ ಪ್ರಜಾಪ್ರಭುತ್ವದ ಅನುಭವವನ್ನು ನೀಡುತ್ತದೆ. ಸಭೆಯಲ್ಲಿ ಭಾಗವಹಿಸುವ ಮೂಲಕ, ಮಕ್ಕಳು ನಿರ್ಣಾಯಕ ಕೌಶಲ್ಯಗಳನ್ನು ಪಡೆಯುತ್ತಾರೆ ಮಕ್ಕಳು, ತಮ್ಮ ಶಾಲೆಗಳಿಗೆ ಮೂಲಸೌಕರ್ಯ ಮತ್ತು ಸಿಬ್ಬಂದಿ ಅಗತ್ಯತೆಗಳು, ಶುದ್ಧ ಕುಡಿಯುವ ನೀರಿನ ಅಗತ್ಯತೆ, ಮತ್ತು ಇತರೆ ಸಮಸ್ಯೆಗಳಿಗೆ ಕುರಿತು ಚರ್ಚಿಸಿದ್ದಾರೆ ಎಂದರು.ಸಭೆಯಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಚ್ ಉಮೇಶ್ ನಾಯಕ್, ಮಾಜಿ ಅಧ್ಯಕ್ಷೆ ಪದ್ಮಾವತಿ ಜಯರಾಮ್, ಉಪಾಧ್ಯಕ್ಷರು ಸದಸ್ಯರುಗಳು ಗ್ರಾಮಸ್ಥರಾದ ಶಿವರುದ್ರಪ್ಪ, ನಾಗ ರಾಜು ಸೇರಿದಂತೆ ಹಲವರು ಭಾಗಿಯಾಗಿದ್ದರು.