ಹುಬ್ಬಳ್ಳಿ: ಮುಡಾ ಹಗರಣದಲ್ಲಿ ದೂರುದಾರರಾಗಿರುವ ಸ್ನೇಹಮಯಿ ಕೃಷ್ಣ ಹೇಳಿರುವಂತೆ ಮುದ್ರಾಂಕ ಶುಲ್ಕವನ್ನು ತಹಶೀಲ್ದಾರ್ ಅವರೇ ಪಾವತಿಸಿದ್ದಾರೆ. ಇದರಲ್ಲಿ ತಪ್ಪೇನಿದೆ ಎಂದು ಮುಖ್ಯಮಂತ್ರಿಯವರ ಪುತ್ರ ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಸ್ನೇಹಮಯಿ ಕೃಷ್ಣ ಆರೋಪಕ್ಕೆ ಸಂಬAಧಪಟ್ಟAತೆ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ನಮ್ಮ ತಾಯಿಯವರಿಗೆ ಹುಷಾರಿರಲಿಲ್ಲ. ಹಾಗಾಗಿ ತಹಶೀಲ್ದಾರ್ ಅವರು ಅತಿಥಿಗೃಹಕ್ಕೆ ಬಂದಿದ್ದರು. ಅವರ ಬಳಿ ಹಣ ನೀಡಲಾಗಿತ್ತು. ಹಾಗಾಗಿ ಅವರು ಅದನ್ನು ಪಾವತಿಸಿದ್ದಾರೆ. ಇದ್ದರಲ್ಲಿ ತಪ್ಪೇನಿದೆ ಎಂದು ಯತೀಂದ್ರ ತಿಳಿಸಿದ್ದಾರೆ.