ಬೆಂಗಳೂರು: ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಗೆ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ.ಕೇಂದ್ರ ಶಿಸ್ತು ಸಮಿತಿಯ ಓಂ ಪಾಟಕ್ ಸಮಿತಿಯಿಂದ ಯತ್ನಾಳ್ಗೆ ನೋಟಿಸ್ ಜಾರಿ ಮಾಡಿದ್ದು, 10 ದಿನದೊಳಗಾಗಿ ವಿವರಣೆ ನೀಡುವಂತೆ ಸೂಚಿಸಲಾಗಿದೆ.
ರಾಜ್ಯ ಮಟ್ಟದ ಪಕ್ಷದ ನಾಯಕತ್ವದ ವಿರುದ್ಧ ನಿಮ್ಮ ನಿರಂತರ ವಾಗ್ದಾಳಿ ಮತ್ತು ಪಕ್ಷದ ನಿರ್ದೇಶನಗಳನ್ನು ಧಿಕ್ಕರಿಸುವುದು, ರಾಜಕೀಯ ಮತ್ತು ಸಾರ್ವಜನಿಕ ಪ್ರಾಮುಖ್ಯತೆಯ ಎಲ್ಲಾ ವಿಷಯಗಳ ಬಗ್ಗೆ ಪಕ್ಷದ ಅಧಿಕೃತ ನಿಲುವಿಗೆ ವಿರುದ್ಧವಾಗಿ ಸಾರ್ವಜನಿಕ ಹೇಳಿಕೆಗಳು ನೀಡುತ್ತಿದ್ದಿರಿ. ನಿಲುವುಗಳನ್ನು ನಿಮ್ಮ ಮಾಧ್ಯಮಗಳು ಹೇಳಿಕೆಗಳು ಮತ್ತು ವಿವಿಧ ಪಕ್ಷದ ವೇದಿಕೆಗಳಲ್ಲಿ ವರದಿ ಯಾಗಿದೆ. ಈ ಹಿಂದೆಯೂ ಹಲವು ಬಾರಿ ಶೋಕಾಸ್ ನೋಟಿಸ್ ಜಾರಿ ಮಾಡಿದ್ದರೂ. ನಿಮ್ಮ ಸದ್ವರ್ತನೆಯ ಭರವಸೆ ನೀಡಿದ್ದರೂ ಅಶಿಸ್ತಿನಿಂದ ನಡೆದುಕೊಳ್ಳುತ್ತಿರೋದು ಆತಂಕಕಾರಿ ಸಂಗತಿಯಾಗಿದೆ.
ನಿಮ್ಮ ಹಿರಿತನ ಮತ್ತು ಪಕ್ಷದಲ್ಲಿನ ದೀರ್ಘಾವಧಿಯನ್ನು ಗಮನದಲ್ಲಿಟ್ಟುಕೊಂಡು, ಈ ಹಿಂದೆ ನೀವು ಸಲ್ಲಿಸಿದ ವಿವರಣೆಗಳ ಬಗ್ಗೆ ಕೇಂದ್ರ ಶಿಸ್ತು ಸಮಿತಿಯು ಮೃದುವಾದ ದೃಷ್ಟಿಕೋನವನ್ನು ತೆಗೆದುಕೊಂಡಿತು. ರಾಜಕೀಯ ಮತ್ತು ಸಾರ್ವಜನಿಕ ಪ್ರಾಮುಖ್ಯತೆಯ ವಿಷಯಗಳಲ್ಲಿ ಪಕ್ಷದ ಅಧಿಕೃತ ನಿಲುವನ್ನು ಧಿಕ್ಕರಿಸಿ ಪಕ್ಷದ ನಾಯಕರ ವಿರುದ್ಧ ನೀವು ಮಾಡಿದ ಸುಳ್ಳು ಮತ್ತು ಆಂತರಿಕ ಆರೋಪಗಳು ಬಿಜೆಪಿ ಪಕ್ಷದ ನಿಯಮಗಳ ಘಿಘಿಗಿನೇ ವಿಧಿಯಲ್ಲಿ ವ್ಯಾಖ್ಯಾನಿಸಿದಂತೆ ಪಕ್ಷದ ಶಿಸ್ತಿನ ಗಂಭೀರ ಉಲ್ಲಂಘನೆಯಾಗಿದೆ ಶಿಸ್ತಿನ ಉಲ್ಲಂಘನೆ ನಿಮ್ಮ ವಿರುದ್ಧ ಪಕ್ಷವು ಏಕೆ ಶಿಸ್ತು ಕ್ರಮ ತೆಗೆದುಕೊಳ್ಳಬಾರದು ಎಂಬುದಕ್ಕೆ ದಯವಿಟ್ಟು ಕಾರಣ ಕೊಡಿ ಈ ಸೂಚನೆಯ ಸ್ವೀಕೃತಿಯಿಂದ ಹತ್ತು ದಿನಗಳ ನಂತರ ನಿಮ್ಮ ಉತ್ತರ ನೀಡಬೇಕೆಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.