ಶಿವಂ ದುಬೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಈವರೆಗೆ 35 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ ಟೀಮ್ ಇಂಡಿಯಾ ಸೋತಿರುವುದು ಕೇವಲ 2 ಮ್ಯಾಚ್ಗಳಲ್ಲಿ ಮಾತ್ರ. ಇನ್ನುಳಿದ 33 ಪಂದ್ಯಗಳಲ್ಲಿ ದುಬೆ ಗೆಲುವಿನ ನಗೆ ಬೀರಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಯಾರಿಂದಲೂ ಸಾಧ್ಯವಾಗದ ವಿಶೇಷ ವಿಶ್ವ ದಾಖಲೆಯನ್ನು ಸಹ ನಿರ್ಮಿಸಿದ್ದಾರೆ.
ಟೀಮ್ ಇಂಡಿಯಾ ಪರ ಶಿವಂ ದುಬೆ ಕಣಕ್ಕಿಳಿದರೆ ಗೆಲುವು ಖಚಿತ. ಇದಕ್ಕೆ ಸಾಕ್ಷಿ ಕಳೆದ 30 ಟಿ20 ಪಂದ್ಯಗಳ ಫಲಿತಾಂಶ. ಈ ಫಲಿತಾಂಶಗಳೊಂದಿಗೆ ಇದೀಗ ಶಿವಂ ದುಬೆ ಟಿ20 ಕ್ರಿಕೆಟ್ನಲ್ಲಿ ಯಾರಿಂದಲೂ ಸಾಧ್ಯವಾಗದ ವಿಶೇಷ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ.
ಇದೀಗ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಸರಣಿಯ ಕೊನೆಯ ಎರಡು ಪಂದ್ಯಗಳಲ್ಲಿ ದುಬೆ ಕಣಕ್ಕಿಳಿದಿದ್ದಾರೆ. ಈ ಮ್ಯಾಚ್ಗಳಲ್ಲೂ ಟೀಮ್ ಇಂಡಿಯಾ ಗೆಲುವು ದಾಖಲಿಸಿದೆ. ಇದರೊಂದಿಗೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲಿ ಸತತ 30 ಪಂದ್ಯಗಳಲ್ಲಿ ಗೆಲುವು ನೋಡಿದ ವಿಶ್ವದ ಮೊದಲ ಆಟಗಾರ ಎಂಬ ವಿಶ್ವ ದಾಖಲೆ ಶಿವಂ ದುಬೆ ಪಾಲಾಯಿತು.