ಬೆಂಗಳೂರು: ರಾಜ್ಯದಲ್ಲಿ ಯಾವ ಕುರ್ಚಿಯೂ ಅಲ್ಲಾಡುತ್ತಿಲ್ಲ. ಎಲ್ಲಾ ಕುರ್ಚಿಗಳು ಭದ್ರವಾಗಿವೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರಸ್ ಸ್ಪಷ್ಟಪಡಿಸಿದ್ದಾರೆ. ನಿನ್ನೆ ಪ್ರಧಾನಮಂತ್ರಿಯವರು ರಾಜ್ಯಕ್ಕೆ ಭೇಟಿ ನೀಡಿದ್ದ ವೇಳೆಯಲ್ಲಿ ಎಚ್ಎಎಲ್ ಬಳಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಉಪಮುಖ್ಯಮಂತ್ರಿ ಕುರ್ಚಿಗಳು ಅಲ್ಲಾಡುತ್ತಿವೆ ಎಂದು ಕಾಂಗ್ರೆಸ್ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಶಿವಕುಮಾರ್ ಅವರು, ಪ್ರಧಾನಮಂತ್ರಿಯವರ ಕಣ್ಣಿಗೆ ಏನೂ ಕಾಣುತ್ತಿದೆಯೋ ಗೊತ್ತಿಲ್ಲ ಎಂದು ಅವರ ವಿರುದ್ಧ ಕಿಡಿಕಾರಿದರು.



