ಬೆಂಗಳೂರು ಗ್ರಾಮಾಂತರ ಜಿಲ್ಲೆ: ಇಂದಿನ ಯುವ ಸಮೂಹ ವ್ಯಸನಗಳಿಗೆ ದಾಸರಾಗಿ ತಮ್ಮ ಜೀವನವನ್ನು ತಾವೇ ಹಾಳು ಮಾಡಿಕೊಳ್ಳುತ್ತಿದ್ದಾರೆ. ಪ್ರತಿಯೊಬ್ಬ ಯುವಕರು ದುಷ್ಚಟಗಳಿಂದ ದೂರವಿದ್ದು, ಸಮಾಜದಲ್ಲಿ ಒಳ್ಳೆಯ ಶಿಕ್ಷಣಾಭ್ಯಾಸ ಪಡೆದು ಜೀವನ ರೂಢಿಸಿಕೊಳ್ಳಿ ಎಂದು ರಾಜ್ಯ 5 ನೇ ಹಣಕಾಸು ಆಯೋಗದ ಅಧ್ಯಕ್ಷ ಸಿ. ನಾರಾಯಣಸ್ವಾಮಿ ಅಭಿಪ್ರಾಯ ಪಟ್ಟರು.
ದೇವನಹಳ್ಳಿ ತಾಲೂಕಿನ ವಿಶ್ವನಾಥಪುರ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಪಂ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ “ಡಾ. ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ” ಅಂಗವಾಗಿ “ವ್ಯಸನ ಮುಕ್ತ ದಿನಾಚರಣೆ” ಕಾರ್ಯಕ್ರಮವನ್ನು ಉದ್ಘಾಟಿಸಿ ಜೋಳಿಗೆ ಹರಿಕಾರ ಡಾ. ಮಹಾಂತ ಶಿವಯೋಗಿಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಅವರು ಮಾತನಾಡಿದರು.
ಡೆಂಗ್ಯೂ ರೋಗದ ಬಗ್ಗೆ ಎಚ್ಚರ ವಹಿಸಿ: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಕಂಡು ಬರುತ್ತಿದ್ದು , ರೋಗ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಕ್ರಮ ಕೈಗೊಂಡು ಜಾಗೃತಿ ಮೂಡಿಸುತ್ತಿದೆ. ಡೆಂಗ್ಯೂ ರೋಗ ನಿಯಂತ್ರಣದಲ್ಲಿ ಸಾರ್ವಜನಿಕರ ಪಾತ್ರ ಮಹತ್ವದ್ದಾಗಿದ್ದು ಮನೆ ಮೇಲ್ಛಾವಣಿ ಹಾಗೂ ಇನ್ನಿತರ ಪ್ರದೇಶ ಅಥವಾ ವಸ್ತುಗಳಲ್ಲಿ(ಟೈರ್, ತೆಂಗಿನ ಚಿಪ್, ಡ್ರಮ್ ಇತ್ಯಾದಿ) ನೀರು ನಿಲ್ಲದಂತೆ ನೋಡಿಕೊಂಡು ಸೊಳ್ಳೆಗಳ ಉತ್ಪತ್ತಿಯನ್ನು ನಾಶ ಮಾಡಬೇಕು.
ಸೊಳ್ಳೆಗಳಿಂದ ಡೆಂಗ್ಯೂ, ಚಿಕನ್ ಗುನ್ಯ ಅಂತಹ ಸಾಂಕ್ರಾಮಿಕ ರೋಗಗಳು ಹರಡುವುದರಿಂದ ಸಾರ್ವಜನಿಕರು ಸೊಳ್ಳೆ ಕಡಿತದಿಂದ ಜಾಗೃತರಾಗಿರಿ- ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ಕಾರ್ಯಕ್ರಮದಲ್ಲಿ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿ ಕಾರಿ ಡಾ.ಕೆ.ಎನ್ ಅನುರಾಧ, ದೊಡ್ಡಬಳ್ಳಾಪುರ ವೈಜ್ಞಾನಿಕ ಸಂಶೋಧನಾ ಪರಿಷತ್ ಸಂಸ್ಥಾಪಕ ಅಧ್ಯಕ್ಷರಾದ ಹುಲಿಕಲ್ ನಟರಾಜ್ ಅವರು ವ್ಯಸನ ಮುಕ್ತ ಸಮಾಜ ನಿರ್ಮಾಣದ ಕುರಿತು ವಿಶೇಷ ಉಪನ್ಯಾಸವನ್ನು ನೀಡಿದರು.
ಈ ವ್ಯಸನ ಮುಕ್ತ ದಿನಾಚರಣೆ ಅಂಗವಾಗಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ ಕಾರ್ಯಕ್ರಮವನ್ನು ವಿಶ್ವನಾಥಪುರ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿತ್ತು. ದೊಡ್ಡಬಳ್ಳಾಪುರದ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ವ್ಯಸನ ಮುಕ್ತ ಜಾಗೃತಿ ಶಿಬಿರ ಏರ್ಪಡಿಸಿ ಸಾರ್ವಜನಿಕರಿಗೆ ದುಶ್ಚಟಗಳಿಂದಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಲಾಯಿತು.
ವ್ಯಸನ ಮುಕ್ತ ದಿನಾಚರಣೆ ಅಂಗವಾಗಿ ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ವತಿಯಿಂದ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿತ್ತು. ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.ಕಾರ್ಯಕ್ರಮದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪನಿರ್ದೇಶಕರಾದ ಶಫಿ ಸಾದುದ್ದೀನ್ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ಶಾಲಾ ಕಾಲೇಜು ಶಿಕ್ಷಕರು, ವಿದ್ಯಾರ್ಥಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.