ನವದೆಹಲಿ: ಭಾರತದ ರಕ್ಷಣಾ ಪಡೆಗಳ ನೂತನ ಮುಖ್ಯಸ್ಥರನ್ನಾಗಿ ಲೆಫ್ಟಿನೆಂಟ್ ಜನರಲ್ ಎನ್.ಎಸ್ ರಾಜಾ ಸುಬ್ರಮಣಿ (ನಿವೃತ್ತ) ಅವರನ್ನ ಕೇಂದ್ರ ಸರ್ಕಾರ ನೇಮಕ ಮಾಡಿದೆ. ಇದರೊಂದಿಗೆ ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ವೈಸ್ ಅಡ್ಮಿರಲ್ ಕೃಷ್ಣ ಸ್ವಾಮಿನಾಥನ್ ಅವರನ್ನು ನೇಮಕ ಮಾಡಿದೆ.
ಮೇ 30 ರಂದು ಸಿಡಿಎಸ್ ಆಗಿ ತಮ್ಮ ಅಧಿಕಾರಾವಧಿಯನ್ನು ಪೂರ್ಣಗೊಳಿಸಲಿರುವ ಜನರಲ್ ಅನಿಲ್ ಚೌಹಾಣ್ ಅವರ ಸ್ಥಾನವನ್ನು ರಾಜಾ ಸುಬ್ರಮಣಿ ವಹಿಸಿಕೊಳ್ಳಲಿದ್ದಾರೆ.
ಫ್ಟಿನೆಂಟ್ ಜನರಲ್ ಸುಬ್ರಮಣಿ ಪ್ರಸ್ತುತ ರಾಷ್ಟಿçÃಯ ಭದ್ರತಾ ಮಂಡಳಿ ಸಚಿವಾಲಯದಲ್ಲಿ ಮಿಲಿಟರಿ ಸಲಹೆಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕಳೆದ ವರ್ಷ ಜುಲೈ 31 ರಂದು ಅವರು ಸೇನಾ ಸಿಬ್ಬಂದಿಯ ಉಪ ಮುಖ್ಯಸ್ಥರಾಗಿ ಸೇನೆಯಿಂದ ನಿವೃತ್ತರಾಗಿದ್ದರು.
ರಕ್ಷಣಾ ಪಡೆಗಳ ನೂತನ ಮುಖ್ಯಸ್ಥರನ್ನಾಗಿ ಲೆ. ಜನರಲ್ ಎನ್.ಎಸ್ ರಾಜಾ ಸುಬ್ರಮಣಿ ನೇಮಕ



