ಚೆನ್ನೈ: ಹೆಸರಾಂತ ನಟ ರಜನಿಕಾಂತ್ ಅವರಿಗೆ ಅನಾರೋಗ್ಯ ಸಮಸ್ಯೆ ಕೂಡ ಹೆಚ್ಚುತ್ತಿದೆ. ಅವರಿಗೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಅವರ ಹೃದಯ ಪರೀಕ್ಷೆ ಕೂಡ ಮಾಡಿಸಲಾಗುತ್ತಿದೆ.
ಈ ವಿಚಾರ ಕೇಳಿ ಅಭಿಮಾನಿಗಳು ಆತಂಕಗೊಂಡಿದ್ದಾರೆ.
ಅವರ ನಟನೆಯ `ವೆಟ್ಟೈಯಾನ್’ ಸಿನಿಮಾ ಬಿಡುಗಡೆ ಸಂದರ್ಭದಲ್ಲೇ ಈ ರೀತಿ ಆಗಿದೆ.ರಜನಿಕಾಂತ್ ಅವರಿಗೆ ನಿನ್ನೆ ತಡರಾತ್ರಿ ಹೊಟ್ಟೆನೋವು ಕಾಣಿಸಿಕೊಂಡಿದೆ. ಈ ಕಾರಣದಿಂದ ಅವರನ್ನು ತಕ್ಷಣವೇ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಈ ವೇಳೆ ಅವರ ಹೃದಯ ಪರೀಕ್ಷೆ ಕೂಡ ಮಾಡಿಸಲಾಗಿದೆ. ಹೃದಯರೋಗ ತಜ್ಞ ಸಾಯಿ ಸತೀಶ್ ಅವರು ರಜನಿ ಅವರನ್ನು ಪರೀಕ್ಷೆ ಮಾಡಿದ್ದಾರೆ ಎಂದು ಹೇಳಲಾಗಿದ್ದು, ಈಗ ರಜನಿಕಾಂತ್ ಆರೋಗ್ಯ ಸುಸ್ಥಿರವಾಗಿದೆ ಎನ್ನಲಾಗಿದೆ.