ಮಾಸ್ಕೋ: ಪ್ರಧಾನಿ ನರೇಂದ್ರ ಮೋದಿ ಇಂದು ರಷ್ಯಾಕ್ಕೆ ತೆರಳಿದ್ದಾರೆ. ಮಾಸ್ಕೋದಲ್ಲಿ ಪ್ರಧಾನಿ ಮೋದಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾಗಲಿದ್ದಾರೆ.
ಮೂರು ವರ್ಷಗಳ ನಂತರ ಪ್ರಧಾನಿ ಮೋದಿ ರಷ್ಯಾ ಅಧ್ಯಕ್ಷರನ್ನು ಭೇಟಿಯಾಗಲಿದ್ದಾರೆ. ಉಕ್ರೇನ್ ಯುದ್ಧ ಆರಂಭವಾದ ನಂತರ ಇವರಿಬ್ಬರ ಮೊದಲ ಭೇಟಿ ಇದಾಗಿದೆ. ಪ್ರಧಾನಿ ಮೋದಿಯವರ ಈ ಭೇಟಿಯ ಮೇಲೆ ಪಾಶ್ಚಿಮಾತ್ಯ ದೇಶಗಳ ಜೊತೆಗೆ ಚೀನಾ ಕೂಡ ಕಣ್ಣಿಟ್ಟಿದೆ.
ಈ ಮಹತ್ವದ ಭೇಟಿಯಲ್ಲಿ ಪ್ರಧಾನಿ ಮೋದಿ ಅವರು ರಷ್ಯಾದ ಸೇನೆಯಲ್ಲಿ ಭಾರತೀಯರನ್ನು ಸೇರ್ಪಡೆಗೊಳಿಸುವ ಮತ್ತು S-400 ಕ್ಷಿಪಣಿ ವ್ಯವಸ್ಥೆಯ ಎರಡು ಘಟಕಗಳನ್ನು ವಿಳಂಬಗೊಳಿಸುವ ವಿಷಯವನ್ನು ಪ್ರಮುಖವಾಗಿ ಪ್ರಸ್ತಾಪಿಸುವ ಸಾಧ್ಯತೆಗಳಿವೆ.