ಬೆಂಗಳೂರು: ಕನ್ನಡ ನಾಡಿನ ನುಡಿ ಪರಂಪರೆ, ಶ್ರೀಮಂತ ಸಾಹಿತ್ಯ, ಇತಿಹಾಸ, ಸಂಸ್ಕೃತಿಯನ್ನ ಸಂಭ್ರಮಿಸುವ ವೇದಿಕೆಯಾಗಬೇಕಿದ್ದ ಅಖಿಲ ಭಾರತ ಸಾಹಿತ್ಯ ಸಮ್ಮೇಳನವನ್ನ ರಾಜಕೀಯ ವೇದಿಕೆ ಮಾಡಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ತಾಯಿ ಕನ್ನಡಾಂಬೆಗೆ, ಕನ್ನಡಿಗರ ತಾಯ್ನುಡಿಗೆ ಘೋರ ಅಪಮಾನ ಎಸಗಿದ್ದಾರೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಟ್ವಿಟ್ ಮಾಡಿರುವ ಅವರು, ಮುಖ್ಯಮಂತ್ರಿಗಳ ಭಾಷಣದುದ್ದಕ್ಕೂ ರಾಜಕೀಯ ಕೆಸರೆರಚಾಟ, ಪುಸ್ತಕ ಮಳಿಗೆಗಳಲ್ಲಿ ರಾಜಕೀಯ ಪ್ರೇರಿತ ಪುಸ್ತಕಗಳ ಪ್ರದರ್ಶನ, ಮಾರಾಟ – ಇದೇನಾ ಸಾಹಿತ್ಯ ಸಮ್ಮೇಳನದ ಉದ್ದೇಶ ಎಂದು ಪ್ರಶ್ನಿಸಿದ್ದಾರೆ.ಸಾಹಿತ್ಯ ಸಮ್ಮೇಳನದ ಮಳಿಗೆಗಳಲ್ಲಿ ಇಟ್ಟಿರುವ ಎಲ್ಲ ರಾಜಕೀಯ ಪ್ರೇರಿತ ಪುಸ್ತಕಗಳನ್ನ ತೆರವು ಮಾಡಬೇಕು, ರಾಜಕೀಯ ಭಾಷಣಗಳಿಗೆ ಕಡಿವಾಣ ಹಾಕಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನ ಆಗ್ರಹಿಸುತ್ತೇನೆ ಎಂದಿದ್ದಾರೆ.