ಗೃಹ ಸಚಿವ ಜಿ.ಪರಮೇಶ್ವರ್ ಹಾಗೂ ಮೋಹಕ ತಾರೆ ರಮ್ಯ ಭಾಗಿ ಬಹು ನಿರೀಕ್ಷಿತ ಈ ಚಿತ್ರ ಫೆಬ್ರವರಿ 14 ರಂದು ಬಿಡುಗಡೆ ಮಂಜುನಾಥ್ ವಿಶ್ವಕರ್ಮ ಹಾಗೂ ಕಿರಣ್ ಭರ್ತೂರ್ ನಿರ್ಮಾಣದ, ದೀಪಕ್ ಮಧುವನಹಳ್ಳಿ ನಿರ್ದೇಶನದ ಹಾಗೂ `ಫಸ್ಟ್ ರ್ಯಾಂಕ್ ರಾಜು’ ಖ್ಯಾತಿಯ ಗುರುನಂದನ್ ನಾಯಕರಾಗಿ ನಟಿಸಿರುವ `ರಾಜು ಜೇಮ್ಸ್ ಬಾಂಡ್ ” ಚಿತ್ರದ ಪ್ರೀ ರಿಲೀಸ್ ಇವೆಂಟ್ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು.
ಗೃಹ ಸಚಿವರಾದ ಜಿ.ಪರಮೇಶ್ವರ್ ಹಾಗೂ ಮೋಹಕ ತಾರೆ ರಮ್ಯ ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು. ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿ ವೆಂಕಟೇಶ್, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ, ನಿರ್ಮಾಪಕರಾದ ರಮೇಶ್ ರೆಡ್ಡಿ, ಸಂಜಯ್ ಗೌಡ, ನಾಯಕಿ ತಪಸ್ವಿನಿ ಶರ್ಮ ಸೇರಿದಂತೆ ಅನೇಕ ಗಣ್ಯರು ಸಮಾರಂಭಕ್ಕೆ ಆಗಮಿಸಿ ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು. “ರಾಜು ಜೇಮ್ಸ್ ಬಾಂಡ್” ಚಿತ್ರದ ತುಣುಕು ಹಾಗೂ ಹಾಡುಗಳನ್ನು ನೋಡಿದರೆ, ಚಿತ್ರ ಯಶಸ್ವಿಯಾಗುವ ಎಲ್ಲಾ ಲಕ್ಷಣಗಳು ಇದೆ. ಚಿತ್ರ ಯಶಸ್ಸು ಕಾಣಲಿ ಎಂದು ಗೃಹ ಸಚಿವರು ಶುಭ ಕೋರಿದರು.
ಟ್ರೇಲರ್ ಹಾಗೂ ಹಾಡುಗಳು ತುಂಬಾ ಚೆನ್ನಾಗಿದೆ. ಛಾಯಾಗ್ರಹಣವಂತೂ ಸೂಪರ್. ಅಷ್ಟೇ ಚೆನ್ನಾಗಿ ನಾಯಕ ಹಾಗೂ ನಾಯಕಿ ಅಭಿನಯಿಸಿದ್ದಾರೆ. ಪ್ರೇಮಿಗಳ ದಿನದಂದು ಬಿಡುಗಡೆಯಾಗುತ್ತಿರುವ ಈ ಚಿತ್ರ ಭರ್ಜರಿ ಯಶಸ್ಸು ಕಾಣಲಿ ಎಂದು ರಮ್ಯ ಹಾರೈಸಿದರು. ಈಗ ನಮಗೆ ಹೆರಿಗೆ ನೋವು ಶುರುವಾಗಿದೆ. ಫೆ. 14 ಶುಕ್ರವಾರ ಹೆರಿಗೆ ಆಗಲಿದೆ. ಒಂದೊಳ್ಳೆ ಸಿನಿಮಾ ಮಾಡಿರುವ ಖುಷಿಯಿದೆ ಎನ್ನುತ್ತಾರೆ ಮಂಜುನಾಥ್