ಬೆಂಗಳೂರು: ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್ಗೆ ಸಂಬಂಧಪಟ್ಟಂತೆ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ಪ್ರಕರಣದ ತೀರ್ಪು ಇಂದು ಹೊರ ಬೀಳುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಎಚ್ಚರಿಕೆ ವಹಿಸಿದ್ದಾರೆ.
ರಾಜ್ಯ ಪೊಲೀಸ್ ಮಹಾನಿರ್ದೇಶಕ ಎಲ್ಲಾ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಕಟ್ಟೆಚ್ಚರದಿಂದ ಇರುವಂತೆ ಸೂಚನ ನೀಡಿದ್ದಾರೆ.ಸಿದ್ದರಾಮಯ್ಯ ಅವರ ವಿರುದ್ಧ ವ್ಯತಿರಿಕ್ತ ತೀರ್ಪು ಬಂದರೆ ಅವರ ಅಭಿಮಾನಿಗಳು ಪ್ರತಿಭಟನೆ ನಡೆಸುವ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ ಎಲ್ಲೆಡೆ ಪೊಲೀಸ್ ಬಿಗಿಬಂದೋಬಸ್ತ್ ಕಲ್ಪಿಸಲಾಗಿತ್ತು. ಬೆಂಗಳೂರಿನ ಎಲ್ಲಾ ವಿಭಾಗಗಳಲ್ಲಿ ಹೆಚ್ಚಿನ ಪೊಲೀಸರನ್ನು ಭದ್ರತೆಗಾಗಿ ನಿಯೋಜನೆ ಮಾಡಲಾಗಿತ್ತು.
ಸಿಎಂ ಸಿದ್ದರಾಮಯ್ಯ ಅವರ ನಿವಾಸ ಕಾವೇರಿ ಬಳಿಯು ಎಂದಿಗಿಂತ ಹೆಚ್ಚಿನ ಪೊಲೀಸರನ್ನು ಬಂದೋಬಸ್ತ್ಗಾಗಿ ವ್ಯವಸ್ಥೆ ಮಾಡಲಾಗಿತ್ತು. ಎರಡು ಕೆಎಸ್ಆರ್ಪಿ, ಒಂದು ಬಿಎಂಟಿಸಿ ಬಸ್, ಸೇರಿದಂತೆ ಅಪಾರ ಸಂಖ್ಯೆಯ ಪೊಲೀಸರು ಕಾವೇರಿ ನಿವಾಸದ ಬಳಿ ಕಂಡುಬಂದರು.