ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಸಿ.ಟಿ.ರವಿ ನಡುವಿನ ಜಟಾಪಟಿ ರಾಜ್ಯಪಾಲರ ಅಂಗಳ ತಲುಪಿದೆ. ಇಂದು ಗರ್ವನರ್ ಅವರನ್ನು ಭೇಟಿ ಮಾಡಿದ ಸಿಟಿ ರವಿ, ಅಂದು ಪರಿಷತ್ನಲ್ಲಿ ಏನೆಲ್ಲಾ ಆಯ್ತು, ತಮ್ಮ ಬಂಧನದ ಬಳಿಕ ನಡೆದ ಬೆಳವಣಿಗೆಗಳ ಬಗ್ಗೆ ಇಂಚಿಂಚು ಮಾಹಿತಿ ನೀಡಿ ಬಂದಿದ್ದಾರೆ ಇದರ ಬೆನ್ನಲ್ಲೇ ಇದೀಗ ರಾಜ್ಯಪಾಲರಿಗೆ 8 ಪುಟಗಳ ದೂರು ನೀಡಿದ್ದು, ತಮ್ಮ ಮೇಲಿನ ಪೊಲೀಸ್ ದೌರ್ಜನ್ಯದ ಕುರಿತು ಡಿಜಿ & ಐಜಿಪಿಯಿಂದ ಸ್ಪಷ್ಟನೆ ಪಡೆದುಕೊಳ್ಳುವಂತೆ ಮನವಿ ಮಾಡಿದ್ದಾರೆ.
ಡಿ.19ರಂದು ಇಡೀ ರಾತ್ರಿ ನಡೆದ ಪೊಲೀಸರ ಅಮಾನವೀಯ ವರ್ತನೆ ಮಾಡಿದ್ದಾರೆ. ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಬೆಳಗಾವಿ ನಗರ ಪೊಲೀಸ್ ಕಮಿಷನರ್ ಯಡಾ ಮಾರ್ಟಿನ್, ಎಸ್ಪಿ ಗುಳೇದ್ ಮತ್ತು ಇತರೆ ಪೊಲೀಸರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದು, ತಮಗೆ ಪ್ರಾಣಾಪಾಯ ಇದ್ದು, ಸೂಕ್ತ ಭದ್ರತೆ ಕೊಡಬೇಕು ಎಂದು ದೂರಿನಲ್ಲಿ ಮನವಿ ಮಾಡಿದ್ದಾರೆ. ರಾಷ್ಟ್ರಪತಿ, ಕೇಂದ್ರ ಗೃಹ ಇಲಾಖೆ ಗಮನಕ್ಕೂ ತರುವಂತೆ ಪತ್ರದಲ್ಲಿ ಉಲ್ಲೇಖಿಸಿದ್ದು, ದೂರಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧವೂ ಆರೋಪ ಮಾಡಿದ್ದಾರೆ.