ದೇವನಹಳ್ಳಿ: ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ವಿರುದ್ದ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಇಂದು ದೇವನಹಳ್ಳಿಯ ಚಪ್ಪರದಕಲ್ಬಳಿಯಿಂದ ಜಿಲ್ಲಾಧಿಕಾರಿ ಕಛೇರಿಯ ವರೆಗೂ ಪಾದಯಾತ್ರೆ ಮೂಲಕ ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ. ಹೆಚ್. ಮುನಿಯಪ್ಪ ನೇತೃತ್ವದಲ್ಲಿ ಜಿಲ್ಲಾ ಕಾಂಗ್ರೆಸ್ ಪಕ್ಷದ ವತಿಯಿಂದ ಪಾದಯಾತ್ರೆ ಮೂಲಕ ತೆರಳಿ ಪ್ರತಿಭಟನೆಯನ್ನು ನಡೆಸಿದರು, ನಂತರ ಅಪರ ಜಿಲ್ಲಾಧಿಕಾರಿ ಡಾ.ಹೆಚ್ ಅಮರೇಶ್ ಅವರಿಗೆ ಮನವಿ ಪತ್ರವನ್ನು ನೀಡಿದರು.
ರಾಜ್ಯದ ಜನತೆ ಕಾಂಗ್ರೆಸ್ ಪಕ್ಷಕ್ಕೆ 136 ಸ್ಥಾನಗಳ ಬಹುಮತವನ್ನು ನೀಡಿದ್ದು ನಮ್ಮ ಸರ್ಕಾರ ವನ್ನು ರಾಜ್ಯಪಾಲರ ಮೂಲಕ ತೆಗೆಯಲು ಪ್ರಯತ್ನ ನಡೆಸುತ್ತಿರುವ ಬಿಜೆಪಿ ವಿರುದ್ದ ಕೆ.ಹೆಚ್.ಮುನಿಯಪ್ಪ ವಾಗ್ದಾಳಿ ನಡೆಸಿದರು, ಮುಖ್ಯಮಂತ್ರಿಗಳು ರಾಜೀನಾಮೆ ನೀಡುವ ಅವಶ್ಯಕತೆ ಇಲ್ಲಾ ನಮ್ಮ ಸರ್ಕಾರ ಸುಭದ್ರ ವಾಗಿರುತ್ತದೆ ನಾವು ಕಾನೂನಿನ ಮೂಲಕ ನಮ್ಮ ಹೋರಾಟವನ್ನು ಮುಂದುವರೆಸುತ್ತೇವೆ ಎಂದರು.
ವಿಧಾನ ಪರಿಷತ್ ಸದಸ್ಯ ಎಸ್. ರವಿ ಮಾತನಾಡಿ ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದು, ರಾಜ್ಯ ಸರ್ಕಾರದ ವಿಷಯಕ್ಕೆ ಯಾವುದೇ ವಿಷಯದಲ್ಲಿ ತಲೆ ಹಾಕಬಾರದು ಚುನಾವಣೆಯಲ್ಲಿ ಬಹುಮತ ಪಡೆದ ಕಾಂಗ್ರೆಸ್ ಸರ್ಕಾರವನ್ನು ಅಭದ್ರ ಗೊಳಿಸುವ ಹುನ್ನಾರ ನಡೆದಿದೆ. ಯಾವುದೇ ಕಪ್ಪು ಚುಕ್ಕೆ ಇಲ್ಲದ ಸಿದ್ದರಾಮಯ್ಯ ವಿರುದ್ಧ ವಿನಾಕಾರಣ ಸುಳ್ಳು ಆರೋಪ ಮಾಡುತ್ತಿದ್ದಾರೆ. ಅವರ ಪರ ಕರ್ನಾಟಕದ ಜನತೆ ಇದೆ ಎಂದು ಹೇಳಿದರು.
ಬಯಪ ಅಧ್ಯಕ್ಷ ಶಾಂತಕುಮಾರ್ ಮಾತನಾಡಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪೊಲೀಸರು ತನಿಖೆಗೆಅನುಮತಿ ಕೇಳದಿದ್ದರೂ ಮುಡಾ ಪ್ರಕರಣದಲ್ಲಿ ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಅವರ ನಡೆ ಸಂವಿಧಾನ ವಿರೋಧಿ ಮತ್ತು ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದ್ದು ತಕ್ಷಣವೇ ಪ್ರಾಸಿಕ್ಯೂಶನ್ ಅನುಮತಿಯನ್ನು ವಾಪಸ್ ಪಡೆಯಬೇಕು ಎಂದರು.
ಈ ಸಂದರ್ಭದಲ್ಲಿ ಹೊಸಕೋಟೆ ಶಾಸಕರಾದ ಶರತ್ಕುಮಾರ್ಬಚ್ಚೇಗೌಡ, ನೆಲಮಂಗಲ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ದೊಡ್ಡಬಳ್ಳಾಪುರ ಮಾಜಿ ಶಾಸಕ ವೆಂಕಟರವಣಪ್ಪ, ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷರಾದ ಸಿಆರ್.ಗೌಡ, ಬಯಪ ಅಧ್ಯಕ್ಷರಾದ ಶಾಂತಕುಮಾರ್, ದೇವನಹಳ್ಳಿ ತಾಲ್ಲೂಕು ಕಾಂಗ್ರಸ್ ಘಟಕದ ಅಧ್ಯಕ್ಷರಾದ ಪ್ರಸನ್ನಕುಮಾರ್,ರಾಮಚಂದ್ರಪ್ಪ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ರಾಜಣ್ಣ, ತಾಲ್ಲೂಕು ಗ್ಯಾರಂಟಿ ಸಮಿತಿಯ ಸಿ.ಜಗನ್ನಾಥ,ಕೆ.ಆರ್. ನಾಗೇಶ್, ಕೆ.ಸಿ. ಮಂಜುನಾಥ್, ಎಸ್.ಆರ್.ರವಿಕುಮಾರ್, ಅತ್ತಿಬೆಲೆ ನರಸಪ್ಪ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು, ಕಾಂಗ್ರೆಸ್ ಯುವ ಘಟಕದ ನಾಯಕರು, ಕಾರ್ಯಕರ್ತರು ಉಪಸ್ಥಿತರಿದ್ದರು.