ಬೆಂಗಳೂರು: ಕರ್ನಾಟಕ ಬಕಾರಿ ಇಲಾಖೆಯು ಮದ್ಯದಂಗಡಿಗಳಿAದ `ಮಂಥ್ಲಿ ಮನಿ’ ಹೆಸರಿನಲ್ಲಿ ಲಂಚ ಪಡೆಯುತ್ತಿದೆ ಎಂಬ ಆರೋಪ ಕೇಳಿಬಂದ ಬೆನ್ನಲ್ಲೇ ಈ ವಿಚಾರವಾಗಿ ಪ್ರತಿಪಕ್ಷ ನಾಯಕ ಆರ್ ಅಶೋಕ್ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಬೆಂಗಳೂರಿನಲ್ಲಿ ರೌಡಿಗಳು ಹಫ್ತಾ ವಸೂಲಿ ಮಾಡುತ್ತಿದ್ದರು ಈಗ ಈ ಸರ್ಕಾರದ ಸಚಿವರು ಹಫ್ತಾ ವಸೂಲಿಗೆ ಇಳಿದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಬಕಾರಿ ಇಲಾಖೆಯಲ್ಲಿ ಸಚಿವ ತಿಮ್ಮಾಪುರ ವಾರಕ್ಕೆ ೧೮ ಕೋಟಿ ರೂ. ಮದ್ಯದಂಗಡಿಗಳಿAದ ಹಫ್ತಾ ವಸೂಲಿ ಮಾಡುತ್ತಿದ್ದಾರೆ. ಈ ಬಗ್ಗೆ ರಾಜ್ಯಪಾಲರಿಗೆ ಮದ್ಯದಂಗಡಿ ಮಾಲೀಕರೇ ದೂರು ಕೊಟ್ಟಿದ್ದಾರೆ. ರಾಜ್ಯದಲ್ಲಿ ೧೧ ಸಾವಿರಕ್ಕೂ ಹೆಚ್ಚು ವೈನ್ ಸ್ಟೋರ್ಗಳಿವೆ. ಪ್ರತಿಯೊಂದರಿAದ ೨೦ ಸಾವಿರ ರೂ. ವಸೂಲಿ ಮಾಡುತ್ತಿದ್ದಾರೆ ಎಂದು ಅಶೋಕ್ ಗಂಭೀರ ಆರೋಪ ಮಾಡಿದರು.
ನಮ್ಮ ವಿರುದ್ಧ ಹಿಂದೆ ಪೇಸಿಎಂ ಪೋಸ್ಟರ್ ಅಂಟಿಸಿದ್ದಿರಿ. ಆಗ ನಾವು ನಿಮ್ಮನ್ನು ಸನ್ಮಾನ ಮಾಡಲು ಆಗಲಿಲ್ಲ. ಈಗ ಪೇಸಿಎಂ ಪೋಸ್ಟರ್ ಅಂಟಿಸಿದಾಗ ಹೇಳಿ ಬಂದು ಸನ್ಮಾನ ಮಾಡುತ್ತೇವೆ ಎಂದು ಅಶೋಕ್ ವ್ಯಂಗ್ಯವಾಡಿದರು.
ಲೋಕಾಯುಕ್ತ ಅಧಿಕಾರಿಗಳಿಂದ ಸಿದ್ದರಾಮಯ್ಯ ವಿಚಾರಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಅಶೋಕ್, ಈ ಸರ್ಕಾರದಲ್ಲಿ ಪ್ರತಿ ನಿತ್ಯ ಒಬ್ಬರಲ್ಲ ಒಬ್ಬ ಸಚಿವರು ಲೂಟಿ ಹೊಡೆಯುತ್ತಿದ್ದಾರೆ. ೪೦ ವರ್ಷದ ರಾಜಕೀಯ ಜೀವನ ತೆರೆದ ಪುಸ್ತಕ ಎಂದಿದ್ದರು. ತೆರೆದ ಪುಸ್ತಕ ಎಂದವರು ಲೋಕಾಯುಕ್ತ ವಿಚಾರಣೆಗೆ ಹೋಗಿದ್ದಾರೆ. ಮುಖ್ಯಮಂತ್ರಿ ಆಗಿ ವಿಚಾರಣೆ ಎದುರಿಸುತ್ತಿದ್ದಾರೆ, ನಾಚಿಕೆ ಆಗಲ್ವಾ ಎಂದು ಅಶೋಕ್ ಕಿಡಿಕಾರಿದರು.
ಬೆಳಗ್ಗೆ ವಿಚಾರಣೆ ಅಂತೆ, ಮಧ್ಯಾಹ್ನ ಪ್ರಚಾರ ಅಂತೆ. ಸಿಎಂ ಮೊದಲೇ ಟೈಮ್ ಫಿಕ್ಸ್ ಮಾಡಿಕೊಂಡು ಹೋಗಿದ್ದಾರೆ. ಇದೇನು ಮ್ಯಾಚ್ ಫಿಕ್ಸಿಂಗ್ ಕೇಸಾ ಎಂದು ಅಶೋಕ್ ವಾಗ್ದಾಳಿ ನಡೆಸಿದರು.
ತನಿಖಾಧಿಕಾರಿಗಳು ಎಷ್ಟು ಹೊತ್ತು ವಿಚಾರಣೆ ನಡೆಸ್ತಾರೆಂದು ಗೊತ್ತಾ? ಇವರೇ ಲೋಕಾಯುಕ್ತ ವಿಚಾರಣೆಗೆ ಸಮಯ ನಿಗದಿ ಮಾಡಿದ್ದಾರಾ ಎಂದು ಅಶೋಕ್ ಪ್ರಶ್ನೆಗಳ ಮಳೆಗೈದರು.