ಬೆಂಗಳೂರು: ಪಕ್ಷದಲ್ಲಿನ ವಿದ್ಯಮಾನದಿಂದ ಅಸಮಾಧಾನಗೊಂಡಿದ್ದ ಮಾಜಿ ಸಚಿವ ಹಾಗೂ ಪಕ್ಷದ ಹಿರಿಯ ಮುಖಂಡ ಬಿಜೆಪಿಯ ಬಿ.ಶ್ರೀರಾಮುಲು ಅವರ ಅಸಮಾಧಾನವನ್ನು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಶಮನಗೊಳಿಸಿದ್ದಾರೆ.ಕಳೆದ ಬಾರಿ ರಾಜ್ಯದಲ್ಲಿ ನಡೆದ ಬಿಜೆಪಿ ಕೋರ್ ಕಮಿಟಿ ಸಭೆ ವೇಳೆ ಸಂಡೂರು ವಿಧಾನಸಭಾ ಕ್ಷೇತ್ರದ ಉಪ-ಚುನಾವಣೆ ವಿಚಾರ ಪ್ರಸ್ತಾಪಿಸಿ ರಾಮುಲು ವಿರುದ್ಧ ಪಕ್ಷದ ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್ ಬೇಸರ ವ್ಯಕ್ತಪಡಿಸಿದ್ದರು.
ರಾಧಾಮೋಹನ್ ದಾಸ್ ಅಗರ್ವಾಲ್ ಅವರ ಮಾತಿನಿಂದ ಅಸಮಾಧಾನಗೊಂಡು ಶ್ರೀರಾಮುಲು ಬಂಡಾಯದ ಬಾವುಟ ಹಾರಿಸಿದ್ದು, ಜೊತೆಗೆ ಹೈಕಮಾಂಡ್ ನಾಯಕರ ಭೇಟಿಗೆ ಮುಂದಾಗಿದ್ದರು.ರಾಮುಲುಗೆ ಹೈಕಮಾಂಡ್ ನಾಯಕರ ಭೇಟಿಗೆ ಅವಕಾಶ ಸಿಕ್ಕದ ಹಿನ್ನೆಲೆಯಲ್ಲಿ ದೆಹಲಿ ಭೇಟಿಯನ್ನು ಕೈಬಿಟ್ಟಿದ್ದರು.ಈ ಮಧ್ಯೆ ರಾಮುಲು ಬಂಡಾಯ ಶಮನಕ್ಕೆ ಮುಂದಾಗಿದ್ದ ವಿಜಯೇಂದ್ರ ರಾಮುಲು ಅವರನ್ನು ಸಮಾಧಾನ ಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇದೀಗ ಸಮಾಧಾನಹೊಂದಿರುವ ರಾಮುಲು ಶೀಘ್ರದಲ್ಲಿಯೇ ದೆಹಲಿಗೆ ಭೇಟಿ ನೀಡಿ ಪಕ್ಷದ ಪಕ್ಷದ ರಾಷ್ಟ್ರೀಯಾ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿರುವ ರಾಮುಲು.ಬಿಜೆಪಿಯಲ್ಲಿ ಒಡೆದ ಮನಸ್ಸುಗಳನ್ನು ಒಂದುಗೂಡಿಸುವ ನೆಪವಿಟ್ಟುಕೊಂಡು ಹೈಕಮಾಂಡ್ ನಾಯಕರ ಭೇಟಿಗೆ ನಿರ್ಧಾರ. ಬಿಜೆಪಿಯಲ್ಲಿ ಸದ್ಯದ ಮಟ್ಟಿಗೆ ರಾಮುಲು ಬಂಡಾಯ ಶಮನಗೊಂಡಿದೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.