ಕನಕಪುರ: ರಾಷ್ಟ್ರೀಯ ಸೇವಾ ಯೋಜನೆ ಅಡಿಯಲ್ಲಿ ತಾಲ್ಲೂಕಿನ ಸಾತನೂರು ಹೋಬಳಿಯ ದೊಂಬರದೊಡ್ಡಿ ಗ್ರಾಮದಲ್ಲಿ ನಡೆದ ಆರೋಗ್ಯ ತಪಾಸಣಾ ಶಿಬಿರದಲ್ಲಿ ಗ್ರಾಮಸ್ಥರು ಆರೋಗ್ಯ ತಪಾಸಣೆ ಪ್ರಯೋಜನವನ್ನು ಪಡೆದುಕೊಂಡರು.
ಗ್ರಾಮಾಂತರ ಪದವಿ ಪೂರ್ವ ಕಾಲೇಜು ವತಿಯಿಂದ ಹಮ್ಮಿಕೊಂಡಿರುವ ರಾಷ್ಟ್ರೀಯ ಸೇವಾ ಯೋಜನೆ ಶಿಬಿರ ದಲ್ಲಿ ದೊಂಬರದೊಡ್ಡಿ ಗ್ರಾಮದಲ್ಲಿ ಗ್ರಾಮಸ್ಥರು ಮತ್ತು ರಾಸುಗಳಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ನೇತ್ರ ತಪಾಸಣೆ, ಉಚಿತ ಆರೋಗ್ಯ ತಪಾಸಣಾ ಶಿಬಿರ ದಲ್ಲಿ ದೊಂಬರದೊಡ್ಡಿ ಗ್ರಾಮಸ್ಥರು ತಮ್ಮ ಆರೋಗ್ಯ ವನ್ನು ತಪಾಸಣೆ ಮಾಡಿಕೊಳ್ಳುವ ಮೂಲಕ ಶಿಬಿರದ ಪ್ರಯೋಜನ ಪಡೆದರು,ಹಿರಿಯ ನಾಗರಿಕರು ಕಣ್ಣಿನ ತಪಾಸಣೆಯಲ್ಲಿ ಭಾಗಿಯಾಗಿದ್ದರು,ಸಾತನೂರು ಗ್ರಾಮದ ಸಾರ್ವಜನಿಕ ಆಸ್ಪತ್ರೆ ವೈದ್ಯಾಧಿಕಾರಿ ಪುಟ್ಟೇಗೌಡ ಹಾಗೂ ಸಿಬ್ಬಂದಿಗಳು ಗ್ರಾಮಸ್ಥರ ಆರೋಗ್ಯ ತಪಾಸಣೆ ನಡೆಸಿ ಔಷಧಿ ವಿತರಣೆ ಮಾಡಿದರು.
ರಾಸುಗಳ ಆರೋಗ್ಯ ತಪಾಸಣಾ ಶಿಬಿರದಲ್ಲಿ ದೊಂಬರ ದೊಡ್ಡಿ ಗ್ರಾಮದ ರೈತರು ತಮ್ಮ ರಾಸುಗಳನ್ನು ತಪಾಸಣೆ ಗೊಳಪಡಿಸಿ ಶಿಬಿರದ ಪ್ರಯೋಜನ ಪಡೆದರು ರಾಷ್ಟ್ರೀಯ ಸೇವಾ ಯೋಜನೆ ಶಿಬಿರಾರ್ಥಿಗಳು ದೊಂಬರದೊಡ್ಡಿ ಗ್ರಾಮದ ಪ್ರತಿ ಮನೆ -ಮನೆಗಳಿಗೆ ತೆರಳಿ ಆರೋಗ್ಯ ಸಮಸ್ಯೆ ಇರುವ ವೃದ್ಧರು,ಮಹಿಳೆಯರನ್ನು ಕರೆತಂದು ಆರೋಗ್ಯ ತಪಾಸಣೆ ನಡೆಸಿದರು.
ಸಾತನೂರು ಸಾರ್ವಜನಿಕ ಆಸ್ಪತ್ರೆ ವೈಧಾಧಿಕಾರಿ ಪುಟ್ಟೇಗೌಡ, ಪಶು ವೈದ್ಯರು, ಸಿಬ್ಬಂದಿಗಳು ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಶಿಬಿರದ ಅಧಿಕಾರಿ ಕುಮಾರ್, ಅಶೋಕ್ ಮತ್ತು ಆರಾಧ್ಯ ಹಾಗೂ ವಿದ್ಯಾರ್ಥಿ ಗಳು ಸಾರ್ವಜನಿಕರು ಈ ವೇಳೆ ಉಪಸ್ಥಿತರಿದ್ದರು.