ಬೆಂಗಳೂರು: ದೇಶದಲ್ಲಿ ಕರಾಳ ಕಪ್ಪು ಕೃಷಿ ಕಾಯ್ದೆಗಳನ್ನು ರದ್ದುಪಡಿಸಿತ್ತೇವೆ ಹಾಗೂ ರೈತರಿಗೆ ಎಂ ಎಸ್ ಪಿ ಜಾರಿಗೊಳಿಸಲಾಗುತ್ತದೆ ಎಂದು ಸುಳ್ಳು ಭರವಸೆ ನೀಡಿದ್ದ ಕೇಂದ್ರ ಬಿಜೆಪಿ ಸರ್ಕಾರದ ವಿಶ್ವಾಸದ್ರೋಹ ನೀತಿಯನ್ನು ವಿರೋಧಿಸಿ ದೆಹಲಿಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾದ ನಾಯಕ ಜಗಜಿತ್ ಸಿಂಗ್ ದಲೆವಾಲಾ ರವರ ನಿರಂತರ ಅಮರನಾಂತ ಉಪವಾಸ ಸತ್ಯಾಗ್ರಹವನ್ನು ಬೆಂಬಲಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘ ಘೋಷಿಸಿರುವ ನಿರಂತರ ಉಪವಾಸ ಸತ್ಯಾಗ್ರಹಕ್ಕೆ ಆಮ್ ಆದ್ವಿ ಪಕ್ಷ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಹಿಂದಿಲ್ಲಿ ಘೋಷಿಸಿದರು.
ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಆರಂಭವಾದ ರೈತರ ಉಪವಾಸ ಸತ್ಯಾಗ್ರಹಕ್ಕೆ ಆಗಮಿಸಿದ ಮುಖ್ಯಮಂತ್ರಿ ಚಂದ್ರು. ಪತ್ರಕರ್ತರೊಂದಿಗೆ ಮಾತನಾಡುತ್ತಾ ” ರೈತರಿಗೆ ಕನಿಷ್ಠ ಬೆಂಬಲ ಬೆಲೆ ಹಾಗೂ ಕರಾಳ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುತ್ತೇವೆಂದು ಹೇಳಿದ್ದ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಸರ್ಕಾರ ಎರಡುವರೆ ವರ್ಷಗಳಾದರೂ ಸಹ ಇಂದಿಗೂ ಜಾರಿಗೊಳಿಸದೆ ದೇಶದ ಕೋಟ್ಯಂತರ ರೈತರುಗಳಿಗೆ ಮಾಡಿರುವ ವಿಶ್ವಾಸದ್ರೋಹವೆಂದು. ಹಾಗೂ ಹೋರಾಟದಲ್ಲಿ ಭಾಗವಹಿಸಿದ್ದ ನೂರಾರು ರೈತರ ಸಾವುಗಳಿಗೆ ಮಾಡಿರುವ ಸಂಪೂರ್ಣ ಅಪಮಾನ” ಎಂದು ಖಂಡನೆ ವ್ಯಕ್ತಪಡಿಸಿದರು.
ಆಮ್ ಆದ್ಮಿ ಪಕ್ಷವು ಸದಾ ರೈತರ ನಿರಂತರ ಹೋರಾಟಗಳಿಗೆ ಬೆಂಬಲ ನೀಡುತ್ತದೆ ಎಂದು ಘೋಷಿಸಿದರು. ಉಪವಾಸ ಸತ್ಯಾಗ್ರಹದಲ್ಲಿ ರೈತನಾಯಕ ಕುರುಬೂರು ಶಾಂತಕುಮಾರ್ , ಪಕ್ಷದ ಬೆಂಗಳೂರು ನಗರ ಘಟಕದ ಅಧ್ಯಕ್ಷ ಡಾ. ಸತೀಶ್ , ಕಾರ್ಯದರ್ಶಿ ಜಗದೀಶ್ ಚಂದ್ರ ಸೇರಿದಂತೆ ಅನೇಕ ರೈತ ನಾಯಕರುಗಳು ಭಾಗವಹಿಸಿದ್ದರು.