ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು 71,000ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ವಿತರಿಸಿದ್ದಾರೆ. ಈ ಸಂದರ್ಭದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಇದು ರಾಷ್ಟ್ರ ನಿರ್ಮಾಣ ಮತ್ತು ಸ್ವಯಂ ಸಬಲೀಕರಣದಲ್ಲಿ ಭಾಗವಹಿಸಲು ಯುವಜನರಿಗೆ ಅರ್ಥಪೂರ್ಣ ಅವಕಾಶಗಳನ್ನು ಒದಗಿಸುತ್ತದೆ ಎಂದಿದ್ದಾರೆ. ದೇಶಾದ್ಯಂತ 45 ಸ್ಥಳಗಳಲ್ಲಿ ರೋಜ್ಗಾರ್ ಮೇಳ ನಡೆಯಲಿದೆ. ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳಿಗೆ ನೇಮಕಾತಿಗಳು ನಡೆಯುತ್ತಿವೆ.
ಕಳೆದ 18 ತಿಂಗಳ ಅವಧಿಯಲ್ಲಿ ಸುಮಾರು 10 ಲಕ್ಷ ಜನರಿಗೆ ಖಾಯಂ ಸರ್ಕಾರಿ ಉದ್ಯೋಗ ನೀಡುವ ಮೂಲಕ ನಮ್ಮ ಸರ್ಕಾರ ದಾಖಲೆ ಸ್ಥಾಪಿಸಿದೆ. ಕಳೆದ 1ರಿಂದ 1.5 ವರ್ಷಗಳಲ್ಲಿ ನಮ್ಮ ಸರ್ಕಾರವು ಸುಮಾರು 10 ಲಕ್ಷ ಯುವಕರಿಗೆ ಶಾಶ್ವತ ಸರ್ಕಾರಿ ಉದ್ಯೋಗಗಳನ್ನು ನೀಡಿದೆ. ಇದು ಸ್ವತಃ ಬಹಳ ದೊಡ್ಡ ದಾಖಲೆಯಾಗಿದೆ. ಹಿಂದಿನ ಯಾವುದೇ ಸರ್ಕಾರದ ಅಧಿಕಾರಾವಧಿಯಲ್ಲಿ ಯುವಕರು ಶಾಶ್ವತ ಸರ್ಕಾರಿ ಉದ್ಯೋಗಗಳನ್ನು ಪಡೆದಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.