ನವದೆಹಲಿ: ಕೇಂದ್ರ ಲೋಕಸೇವಾ ಆಯೋಗದ ನೂತನ ಅಧ್ಯಕ್ಷರಾಗಿ ನಿವೃತ್ತ ಐಎಎಸ್ ಅಧಿಕಾರಿ ಪ್ರೀತಿ ಸೂದನ್ ಆಯ್ಕೆಯಾಗಿದ್ದು, ನಾಳೆ ಅಧಿಕಾರ ಸ್ವೀಕರಿಸಲಿದ್ದಾರೆ.೧೯೮೩ರ ಬ್ಯಾಚ್ನ ಐಎಎಸ್ ಅಧಿಕಾರಿ ಪ್ರೀತಿ ಸೂದನ್ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.ಟ್ರೈನಿ ಐಎಎಸ್ ಪೂಜಾ ಖೇಡ್ಕರ್ ವಿವಾದದ ಸಂದರ್ಭದಲ್ಲಿ ಯುಪಿಎಸ್ಸಿ ಮಾಜಿ ಅಧ್ಯಕ್ಷ ಮನೋಜ್ ಸೋನಿ ರಾಜೀನಾಮೆ ನೀಡಿದ ನಂತರ ಈ ಹುದ್ದೆ ಖಾಲಿಯಾಗಿತ್ತು.
ಪ್ರೀತಿ ಸೂದನ್ ಕೇಂದ್ರದ ಮಾಜಿ ಆರೋಗ್ಯ ಕಾರ್ಯದರ್ಶಿಯಾಗಿದ್ದರು. ಅವರು ೨೦೨೨ ರಿಂದ UPSಅ ಸದಸ್ಯರಾಗಿದ್ದಾರೆ.ಪೂಜಾ ಖೇಡ್ಕರ್ ವಿವಾದ ಬೆಳಕಿಗೆ ಬಂದ ನಂತರ, UPSಅ ಮಾಜಿ ಮುಖ್ಯಸ್ಥ ಮಹೇಶ್ ಸೋನಿ ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ರಾಜೀನಾಮೆ ನೀಡಿದ್ದರು. ಪ್ರೀತಿ ಆಂಧ್ರಪ್ರದೇಶ ಕೇಡರ್ನ ಐಎಎಸ್ ಅಧಿಕಾರಿ.
ಅವರು ಆಹಾರ ಸಂಸ್ಕರಣೆ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯ ಕಾರ್ಯದರ್ಶಿಯಾಗಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ರಕ್ಷಣಾ ಸಚಿವಾಲಯದಲ್ಲಿಯೂ ಕೆಲಸ ಮಾಡಿದ್ದಾರೆ. ಅವರು ಏಪ್ರಿಲ್ ೨೦೨೫ ರವರೆಗೆ ಈ ಹುದ್ದೆಯಲ್ಲಿ ಇರುತ್ತಾರೆ.