ಬೆಂಗಳೂರು: ಇತ್ತೀಚಿಗೆ ರಾಜ್ಯಾದ್ಯಂತ ರೈತರು ಹಾಗೂ ಮಠಗಳ ಪಹಣಿಯಲ್ಲಿ ಸರ್ಕಾರದಿಂದ ವಕ್ಫ್ ಆಸ್ತಿ ಎಂದು ನಮೂದಿಸಿರುವುದರ ನೈಜ ವರದಿಯನ್ನು ಸಂಗ್ರಹಿಸಲು ಪ್ರತಿಪಕ್ಷ ಬಿಜೆಪಿ ‘ನಮ್ಮ ಭೂಮಿ- ನಮ್ಮ ಹಕ್ಕು’ ಘೋಷವಾಕ್ಯದಡಿ ಮೂರು ತಂಡಗಳನ್ನು ರಚಿಸಿದೆ. ಈ ತಂಡಗಳು ಆಯಾಯ ಜಿಲ್ಲಾ ಕೇಂದ್ರಗಳಿಗೆ ಭೇಟಿ ನೀಡಿ ವಿಸ್ಕೃತ ವರದಿ ಸಂಗ್ರಹಿಸಲಿದ್ದಾರೆ.
ಬಿ. ವೈ. ವಿಜಯೇಂದ್ರ ನೇತೃತ್ವದ ಮೊದಲ ತಂಡದಲ್ಲಿ ಪ್ರಲ್ಹಾದ್ ಜೋಶಿ, ಜಗದೀಶ್ ಶೆಟ್ಟರ್, ಭಗವಂತ ಖೂಬಾ, ಡಾ. ಸಿ.ಎನ್. ಅಶ್ವತ್ಥನಾರಾಯಣ, ಮುರುಗೇಶ್ ನಿರಾಣಿ, ಬಿ. ಶ್ರೀರಾಮುಲು, ರಮೇಶ್ ಜಾರಕಿಹೊಳಿ, ಈರಣ್ಣ ಕಡಾಡಿ, ಹಾಲಪ್ಪ ಆಚಾರ್, ಸುನೀಲ್ ವಲ್ಲಾಪುರೆ ಮತ್ತು ವಕೀಲ ಎಂ.ಜಿ. ಜಿರಲಿ ಇದ್ದಾರೆ. ಈ ತಂಡಕ್ಕೆ ಪಿ. ರಾಜೀವ್ ಸಂಚಾಲಕರಾಗಿದ್ದು, ಅರುಣ್ ಶಹಾಪುರ, ಹರೀಶ್ ಪೂಂಜಾ ಮತ್ತು ಡಾ. ಶೈಲೇಂದ್ರ ಬೆಲ್ಲಾಳ ಸಂಯೋಜಕರಾಗಿದ್ದಾರೆ.
ಈ ತಂಡ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು,ಕೊಪ್ಪಳ, ಗದಗ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದೆ.