ಬೆಂಗಳೂರು: ವಕ್ಫ್ ಹಗರಣ ಇಡೀ ದೇಶಾದ್ಯಂತ ಚರ್ಚೆಯಲ್ಲಿದೆ. ರಾಜ್ಯದಲ್ಲೂ ಇದು ದೊಡ್ಡ ಪ್ರಮಾಣದಲ್ಲಿ ಚರ್ಚೆಯಾಗುತ್ತಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಬಿಜೆಪಿ ಹಿರಿಯ ಮುಖಂಡ ಡಾ.ಸಿ.ಎನ್. ಅಶ್ವತ್ಥ್ನಾರಾಯಣ ಹೇಳಿದ್ದಾರೆ.
ಪಕ್ಷದ ರಾಜ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ತುಷ್ಟೀಕರಣ ರಾಜಕಾರಣ ಮಾಡಲು ಈ ನಿರ್ಧಾರ ತೆಗೆದುಕೊಂಡಿದೆ ಎಂದಿದ್ದಾರೆ.ಕೇವಲ ತುಷ್ಟೀಕರಣಕ್ಕಾಗಿ ಇದನ್ನೆಲ್ಲಾ ಮಾಡಲಾಗುತ್ತಿದೆ. ರೈತರ ಭೂಮಿ, ಮಠ ಮಾನ್ಯಗಳ ಜಾಗ ವಕ್ಫ್ ಆಗುತ್ತಿದೆ. ಸರ್ಕಾರ ಅಧಿಕಾರವನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಜಮೀರ್ ಅಹ್ಮದ್ ಖಾನ್ ಅವರು ಸಿಎಂರನ್ನು ಓಲೈಕೆ ಮಾಡುತ್ತಾ, ಆರ್ಟಿಸಿ ನಲ್ಲಿ ಬರುವ ಹಾಗೇ ಮಾಡುತ್ತಿದ್ದಾರೆ ಎಂದು ದೂರಿದರು.
ಈಗ ಕಾಂಗ್ರೆಸ್ ಸರ್ಕಾರ ನೋಟಿಸ್ ಹಿಂಪಡೆಯುವ ಕೆಲಸ ಮಾಡುತ್ತಿದ್ದಾರೆ.ಹಳ ಮುಖ್ಯವಾಗಿ ಆರ್ಟಿಸಿ ನಲ್ಲಿ ಆಗಿರುವ ನಮೂದು ವಾಪಸ್ ಪಡೆಯಬೇಕು. ಇದು ನಮ್ಮ ಆಗ್ರಹ ಎಂದಿರುವ ಅವರು, ನಾವು ಬಿಜೆಪಿ ವತಿಯಿಂದ ಜನಾಂದೋಲನ ಮಾಡಲು ಮುಂದಾಗಿದ್ದೇವೆ ಎಂದಿದ್ದಾರೆ.ನವೆಂಬರ್ 21 ರಿಂದ ಪ್ರತಿ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಧರಣಿ ಮಾಡಲಾಗುತ್ತಿದೆ. ಜನರ ಮೇಲಿನ ಶೋಷಣೆ ತಡೆಯಲು ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಪ್ರತಿ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಹೋರಾಟ ಮಾಡುವ ಕಾರ್ಯಕ್ರಮ ಇದು ಎಂದು ತಿಳಿಸಿದ್ದಾರೆ.