ಸತತ ಎರಡು ಪಂದ್ಯಗಳಲ್ಲಿ ಜಯಭೇರಿ ಬಾರಿಸಿ ಉತ್ತಮ ಫಾರ್ಮ್ನಲ್ಲಿರುವ ಭಾರತೀಯ ವನಿತಾ ತಂಡವು ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿ ಕೂಟದ ಗುರುವಾರದ ಪಂದ್ಯದಲ್ಲಿ ಥಾಯ್ಲೆಂಡ್ ತಂಡವನ್ನು ಎದುರಿಸಲಿದೆ. ಭಾರತ ಮತ್ತು ಹಾಲಿ ಒಲಿಂಪಿಕ್ ಬೆಳ್ಳಿ ವಿಜೇತ ಚೀನಾ ತಂಡವು ಇಷ್ಟರವರೆಗೆ ಆಡಿದ ಪಂದ್ಯಗಳಲ್ಲಿ ಗೆದ್ದು ಅಜೇಯ ಸಾಧನೆ ಮಾಡಿದೆ.
ಆದರೆ ಭಾರತ ಗೋಲು ಅಂತರದಲ್ಲಿ ಹಿನ್ನಡೆಯಲ್ಲಿದ್ದರೆ ಚೀನಾ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.
ಒಂದು ವೇಳೆ ಗುರುವಾರದ ಪಂದ್ಯದಲ್ಲಿ ಭಾರತ ಭಾರೀ ಅಂತರದಲ್ಲಿ ಗೆದ್ದರೆ ತನ್ನ ಗೋಲು ಅಂತರವನ್ನು ಹೆಚ್ಚಿಸಿಕೊಳ್ಳುವ ಸಾಧ್ಯತೆಯಿದೆ. ಭಾರತ ಮುಂದಿನ ಎರಡು ಪಂದ್ಯಗಳಲ್ಲಿ ಚೀನಾ ಮತ್ತು ಜಪಾನ್ ವಿರುದ್ಧ ಆಡಲಿದೆ. ಜಪಾನ್ ಸದ್ಯ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದರೆ ದ.ಕೊರಿಯಾ ನಾಲ್ಕನೇ ಸ್ಥಾನದಲ್ಲಿದೆ.