ದೆಹಲಿ: ಒಂದೆಡೆ ಹೋಳಿ ಮತ್ತೊಂದೆಡೆ ರಂಜಾನ್ ಹಬ್ಬಕ್ಕೆ ದಿನಗಣನೆ ಆರಂಭವಾಗಿದೆ, ಈ ಹೊತ್ತಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ನ ಬೆಲೆ ಏರಿಕೆ ಮಾಡಿರುವುದು ಗ್ರಾಹಕರಿಗೆ ಶಾಕ್ ನೀಡಿದಂತಾಗಿದೆ. ಮಾರ್ಚ್ 1, 2025 ರಿಂದ, ಅಂದರೆ ಇಂದಿನಿಂದ, 19 ಕೆಜಿ ವಾಣಿಜ್ಯ ಐPಉ ಗ್ಯಾಸ್ ಸಿಲಿಂಡರ್ನ ಬೆಲೆಯನ್ನು 6 ರೂ,ಗಳಷ್ಟು ಹೆಚ್ಚಿಸಲಾಗಿದೆ.
ಇಂಡಿಯನ್ ಆಯಿಲ್ ಇಂದಿನಿಂದ ವಾಣಿಜ್ಯ ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳ ಬೆಲೆಯನ್ನು 6 ರೂ. ಹೆಚ್ಚಿಸಿದ್ದು, ಈ ಹಿಂದೆ 1797 ರೂ. ಇದ್ದ ಪ್ರತಿ ಸಿಲಿಂಡರ್ಗೆ 1803 ರೂ.ಗೆ ಏರಿಕೆಯಾಗಿದೆ. ಸರ್ಕಾರಿ ತೈಲ ಕಂಪನಿಗಳು ಪ್ರತಿ ತಿಂಗಳ ಮೊದಲ ದಿನದಂದು ಎಲ್ಪಿಜಿ ಸಿಲಿಂಡರ್ಗಳ ಬೆಲೆಗಳನ್ನು ಪರಿಶೀಲಿಸುತ್ತವೆ. ಇಂದಿನಿಂದ ಹೊಸ ತಿಂಗಳು ಪ್ರಾರಂಭವಾಗುತ್ತಿದೆ.ದೆಹಲಿಯಲ್ಲಿ 19 ಕೆಜಿ ಸಿಲಿಂಡರ್ ಬೆಲೆಯನ್ನು 1797 ರೂ.ಗಳಿಂದ 1803 ರೂ.ಗಳಿಗೆ ಹೆಚ್ಚಿಸಲಾಗಿದೆ. ಕೋಲ್ಕತ್ತಾದಲ್ಲಿ ಹೊಸ ಬೆಲೆ 1907 ರೂ.ಗಳಿಂದ 1913 ರೂ.ಗಳಿಗೆ ಏರಿಕೆಯಾಗಿದೆ. ಮುಂಬೈನಲ್ಲಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ನ ಹೊಸ ಬೆಲೆ 1749.50 ರೂ.ಗಳಿಂದ 1755.50 ರೂ.ಗಳಿಗೆ ಏರಿಕೆಯಾಗಿದೆ. ಚೆನ್ನೈನಲ್ಲಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಗ್ಯಾಸ್ ಈಗ 1959 ರೂ.ಗಳಿಂದ 1965 ರೂ.ಗಳಿಗೆ ಲಭ್ಯವಿರುತತ್ತಿದೆ.
ಇಂದಿನಿಂದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆಲೆಯಲ್ಲಿ ಹೆಚ್ಚಳವಾಗಿದ್ದರೂ, ದೇಶೀಯ ಎಲ್ಪಿಜಿ ಸಿಲಿಂಡರ್ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಆದರೆ ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆಲೆಯಲ್ಲಿನ ಹೆಚ್ಚಳವು ರೆಸ್ಟೋರೆಂಟ್ಗಳಲ್ಲಿನ ಊಟದ ಮೇಲೆ ಪರಿಣಾಮ ಬೀರಬಹುದು. ರೆಸ್ಟೋರೆಂಟ್ಗಳು ತಮ್ಮ ಆಹಾರದ ದರಗಳನ್ನು ಹೆಚ್ಚಿಸಬಹುದು.