ಶಿವಮೊಗ್ಗ: ಒಂದು ವಾರ ಅಥವಾ ಎಂಟತ್ತು ದಿನಗಳೊಳಗೆ ಬಿಜೆಪಿ ಪಕ್ಷಕ್ಕೆ ರಾಜ್ಯಾಧ್ಯಕ್ಷರ ಆಯ್ಕೆ ನಡೆಯಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು ಪಕ್ಷದಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಕುರಿತು ಪ್ರತಿಕ್ರಿಯೆ ನೀಡಿದ ಅವರು, ರಾಜ್ಯಾಧ್ಯಕ್ಷರ ಆಯ್ಕೆ ನಂತರ ನಡೆಯುತ್ತಿರುವ ಎಲ್ಲಾ ವಿದ್ಯಮಾನಗಳಿಗೂ ತೆರೆ ಬೀಳಲಿದೆ. ರಾಜ್ಯಾಧ್ಯಕ್ಷ ಯಾರಾದರೂ ಆಗಬಹುದು ಎಂದು ಅವರು ತಿಳಿಸಿದ್ದಾರೆ.
ಕಳೆದ ಒಂದು ವರ್ಷದಿಂದ ಪಕ್ಷದಲ್ಲಿನ ವಿದ್ಯಮಾನಗಳನ್ನು ನೋಡಿದ್ದೇನೆ. ನಾನು ಯಾರ ವಿರುದ್ಧವೂ ಬಹಿರಂಗವಾಗಿ ಹೇಳಿಕೆ ನೀಡಿಲ್ಲ. ಈಗಲೂ ನೀಡುವುದಿಲ್ಲ ಎಂದಿದ್ದಾರೆ. ಕೆಲವರ ಹೇಳಿಕೆಯಿಂದ ಪಕ್ಷಕ್ಕೆ ಡ್ಯಾಮೇಜ್ ಆಗಿದೆ ಎಂಬ ಮಾಜಿ ಮುಖ್ಯಮಂತ್ರಿ ಸದಾನಂದಗೌಡ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ ಡ್ಯಾಮೇಜ್ ಆಗುವುದು ಆಗಿದೆ ಎಲ್ಲವೂ ಆಗಿ ಹೋಗಿದೆ. ಹೊಸ ರಾಜ್ಯಾಧ್ಯಕ್ಷರು ಬಂದ ನಂತರ ಎಲ್ಲವೂ ಸರಿ ಹೋಗಲಿದೆ ಎಂದು ಪಕ್ಷದ ಬೆಳವಣಿಗೆ ಬಗ್ಗೆ ವಿವರಿಸಿದ್ದಾರೆ.